News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2023 ಆರಂಭ

ನವದೆಹಲಿ: ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2023 ನವದೆಹಲಿಯಲ್ಲಿ ಇಂದಿನಿಂದ ಆರಂಭಗೊಂಡಿದೆ

ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಇಂದು ನವದೆಹಲಿಯಲ್ಲಿ ಪ್ರಾರಂಭವಾಗಿದ್ದು, ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್ ಮತ್ತು ಹೆಚ್ ಎಸ್ ಪ್ರಣಯ್ ಅವರು ಇಂದು ಮಧ್ಯಾಹ್ನದ ಮೊದಲ ಸುತ್ತಿನಲ್ಲಿ ಕಣಕ್ಕಿಳಿಯಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಥಾಯ್ಲೆಂಡ್‌ನ ಸುಪಾನಿಡಾ ಕಟೆಥಾನ್ ವಿರುದ್ಧ ಸೆಣಸಲಿದ್ದು, ಸೈನಾ ನೆಹ್ವಾಲ್ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ವಿರುದ್ಧ ಸೆಣಸಲಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಇಂದು ತಮ್ಮ ಮೊದಲ ಸುತ್ತಿನ ಪಂದ್ಯವನ್ನು ಆಡಲಿದ್ದಾರೆ.

ಮಹಿಳೆಯರ ಡಬಲ್ಸ್‌ನಲ್ಲಿ ಭಾರತದ ಜೋಡಿ ಸಿಕ್ಕಿ ರೆಡ್ಡಿ ಮತ್ತು ಶ್ರುತಿ ಮಿಶ್ರಾ ಜರ್ಮನಿಯ ಲಿಂಡಾ ಎಫ್ಲರ್ ಮತ್ತು ಇಸಾಬೆಲ್ ಲೊಹೌ ವಿರುದ್ಧ 32 ರ ಸುತ್ತಿನಲ್ಲಿ ಸೋಲೊಪ್ಪಿಕೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top