News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2024ರ ಜೂನ್‌ವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರಲಿದ್ದಾರೆ ಜೆಪಿ ನಡ್ಡಾ

ನವದೆಹಲಿ:  ಜಗತ್ ಪ್ರಕಾಶ್ ನಡ್ಡಾ ಅವರು ಮುಂದಿನ ವರ್ಷ ಜೂನ್‌ವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನದಂದು ಘೋಷಿಸಿದ್ದಾರೆ.

ಈ ವರ್ಷ ಒಂಬತ್ತು ರಾಜ್ಯಗಳ ಚುನಾವಣೆಗಳು ನಡೆಯಲಿವೆ ಮತ್ತು 2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿದೆ. ಈ ಮಹತ್ವದ  ಸಂದರ್ಭದಲ್ಲೇ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಹೀಗಾಗಿ ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ನೇತೃತ್ವದಲ್ಲಿ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ 2019 ಕ್ಕಿಂತ ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತದೆ ಎಂದು ನಮಗೆ ವಿಶ್ವಾಸವಿದೆ” ಎಂದು ಈ ವೇಳೆ ಶಾ ಹೇಳಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top