News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅವಧಿ ವಿಸ್ತರಣೆ: ಕಾರ್ಯಕರ್ತರಿಗೆ ನಡ್ಡಾ ಪತ್ರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಉನ್ನತ ಹುದ್ದೆಯನ್ನು ವಿಸ್ತರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ನಿರ್ಧಾರವನ್ನು ದೆಹಲಿಯಲ್ಲಿ ನಡೆದ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ನಡ್ಡಾ ಅವರು ಬಿಜೆಪಿ ಪಕ್ಷವನ್ನು ಈ ವರ್ಷ ಹಲವಾರು ಅಸೆಂಬ್ಲಿ ಚುನಾವಣೆಗಳಲ್ಲಿ ಮುನ್ನಡೆಸಲಿದ್ದಾರೆ ಮತ್ತು ಬಿಜೆಪಿಯ ಮಿಷನ್ 2024 ಅನ್ನು ಸಾಧಿಸುವಲ್ಲಿ ಪ್ರಧಾನಿ ಮೋದಿ ಜೊತೆ ಸೇರಿ ಮುಂದಾಳತ್ವ ವಹಿಸಲಿದ್ದಾರೆ.

ಅಧಿಕಾರಾವಧಿ ವಿಸ್ತರಣೆ ಬಳಿಕ ಕಾರ್ಯಕರ್ತರಿಗೆ ಪತ್ರ ಬರೆದಿರುವ ನಡ್ಡಾ, ತನ್ನ ಮೇಲೆ ತೋರಿಸಿದ ಗೌರವ ಮತ್ತು ವಿಶ್ವಾಸಕ್ಕಾಗಿ  ಕೃತಜ್ಞಪೂರ್ವಕವಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಮುಂದಿನ 2014 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ವರ್ಷದಲ್ಲಿ ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಮತ್ತು ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ, ಅದಕ್ಕಾಗಿ ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಬೇಕು ಎಂದು ಕಾರ್ಯಕರ್ತರಲ್ಲಿ ಕೇಳಿದ್ದಾರೆ.

ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಮಟ್ಟದ ಹುದ್ದೆ ದೊರಕುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದಿರುವ ಅವರು, ನನ್ನ ಮೇಲೆ ಇಟ್ಟಿರುವ ನಿರೀಕ್ಷೆಗಳ ಬಗೆಗೂ ನನಗೆ ಸಂಪೂರ್ಣ ಅರಿವಿದೆ. ಅಮೃತ ಕಾಲದಲ್ಲಿ ನಾವು ನಮ್ಮ ದೃಢ ಮತ್ತು ನಿರಂತರ ಪ್ರಯತ್ನಗಳನ್ನು ಮುಂದುವರಿಸಿ ಏಕ ಭಾರತ ಶ್ರೇಷ್ಠ ಭಾರತದ ನಮ್ಮ ದೃಷ್ಟಿಕೋನವನ್ನು ಸಾಕಾರಗೊಳಿಸಬೇಕಿದೆ ಎಂದಿದ್ದಾರೆ.

ಅಲ್ಲದೇ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರಿಗೂ ನಡ್ಡಾ ಧನ್ಯವಾದ ಅರ್ಪಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top