News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಕೇಂದ್ರ ಸಂಪುಟ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು  ರಾಷ್ಟ್ರ ರಾಜಧಾನಿಯಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದಾರೆ. ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಗಿದ ಒಂದು ದಿನದ ನಂತರ ಸಂಪುಟ ಸಭೆ ನಡೆಯುತ್ತಿದೆ.

ಈ ಸಂಪುಟ ಸಭೆಯಲ್ಲಿ ಅತ್ಯಂತ ಮಹತ್ವದ ನಿರ್ಧಾರಗಳು ಹೊರಬೀಳಲಿದೆ ಎಂದು ನಿರೀಕ್ಷಿಸಲಾಗಿದೆ. ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ಇರುವುದರಿಂದ ಸರ್ಕಾರ ನಿರ್ಧಾರಗಳ ಮೇಲೆ ಸಹಜವಾಗಿಯೇ ಹೆಚ್ಚಿನ ನಿರೀಕ್ಷೆಗಳು ಇರುತ್ತವೆ.

2024ರ ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಮಂಗಳವಾರ ಬಿಜೆಪಿ ಕಾರ್ಯಕಾರಿಣಿ ಸಭೆಯ ಬಳಿಕ ಹೇಳಿದ್ದರು.

ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು, ‘ಪ್ರಧಾನಿ ನರೇಂದ್ರ ಮೋದಿ  ಮತ್ತು ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ 2024 ರ ಲೋಕಸಭೆ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಬಹುಮತದಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ.  ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲು ಮೋದಿ  ಮತ್ತೊಮ್ಮೆ ಮರಳುತ್ತಾರೆ” ಎಂದಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top