News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನ್ಯೂಜಿಲ್ಯಾಂಡ್‌ ಪ್ರಧಾನಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಜಸಿಂದಾ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವುದಾಗಿ ಜಸಿಂದಾ ಆರ್ಡೆರ್ನ್ ಘೋಷಿಸಿದ್ದಾರೆ.

ಕಣ್ಣೀರಿಡುತ್ತಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 7 ದೇಶದ ನಾಯಕಿಯಾಗಿ ತನ್ನ ಕೊನೆಯ ದಿನವಾಗಿರುತ್ತದೆ ಎಂದಿದ್ದಾರೆ.

ಕರೋನವೈರಸ್ ಸಾಂಕ್ರಾಮಿಕ ರೋಗದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಅಂತರರಾಷ್ಟ್ರೀಯ ಐಕಾನ್ ಆಗಿ ಹೊರಹೊಮ್ಮಿದ್ದರು, ಆದರೆ ಸ್ವಂತ ದೇಶದಲ್ಲಿ ಅವರು ಹಲವಾರು ಟೀಕೆಗಳನ್ನು ಎದುರಿಸಬೇಕಾಯಿತು. ನಿರಂತರ ಟೀಕೆಗಳಿಂದ ಬೇಸತ್ತು ಅವರು ಪ್ರಧಾನಿ ಹುದ್ದೆ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ನ್ಯೂಜಿಲೆಂಡ್‌ನ ಮುಂದಿನ ಸಾರ್ವತ್ರಿಕ ಚುನಾವಣೆಯು ಅಕ್ಟೋಬರ್ 14 ರಂದು ನಡೆಯಲಿದೆ ಮತ್ತು ಅಲ್ಲಿಯವರೆಗೆ ತಾನು ಶಾಸಕಿಯಾಗಿಯೇ ಇರುತ್ತೇನೆ ಎಂದು ಅವರು ಘೋಷಿಸಿದ್ದಾರೆ.

ಚುನಾವಣೆಯವರೆಗೂ ಯಾರು ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಉಪ ಪ್ರಧಾನ ಮಂತ್ರಿ ಗ್ರಾಂಟ್ ರಾಬರ್ಟ್‌ಸನ್ ಅವರು ಲೇಬರ್ ಪಕ್ಷದ ನಾಯಕತ್ವಕ್ಕೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್,  ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಸೆಂಟರ್-ಲೆಫ್ಟ್ ಲೇಬರ್ ಪಾರ್ಟಿಯನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ ಕುಸಿತ ಕಂಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top