News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‌WFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ: ವಿವರ ಕೇಳಿದ ಕೇಂದ್ರ

ನವದೆಹಲಿ:  ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರು ಮಹಿಳಾ ತರಬೇತುದಾರರು ಮತ್ತು ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ದೇಶದ ಪ್ರಮುಖ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಫೆಡರೇಶನ್ ಕಾರ್ಯನಿರ್ವಹಣೆಯಲ್ಲಿನ ತಪ್ಪು ನಿರ್ವಹಣೆ, ಅನಿಯಂತ್ರಿತ ಕಾನೂನುಗಳನ್ನು ಹೇರುವ ಮೂಲಕ ತಮಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಯಾರೇ ಮಾತನಾಡಿದರೂ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಸ್ತಿಪಟುಗಳು ಆರೋಪಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನೇಶ್ ಫೋಗಟ್, “ಡಬ್ಲ್ಯುಎಫ್‌ಐ ಅಧ್ಯಕ್ಷರು ಮಹಿಳಾ ಆಟಗಾರರು ಮತ್ತು ತರಬೇತುದಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ನಾನು ಈಗ ಇಲ್ಲಿ ಮಾತನಾಡುತ್ತಿದ್ದೇನೆ, ಆದರೆ  ನಾಳೆ ಬದುಕಿರುತ್ತೇನೆಯೇ ಎಂದು ನನಗೆ ತಿಳಿದಿಲ್ಲ. ಇಲ್ಲಿ ಕುಳಿತಿರುವ ಕೆಲವು ಮಹಿಳಾ ಕುಸ್ತಿಪಟುಗಳೂ ಕಿರುಕುಳವನ್ನು ಅನುಭವಿಸಿದ್ದಾರೆ ಎಂದಿದ್ದಾರೆ.

“ನಾವು ನಮಗಾಗಿ ಹೋರಾಡುತ್ತಿಲ್ಲ, ನಾವು ಕುಸ್ತಿಯನ್ನು ಉಳಿಸಲು ಹೋರಾಡುತ್ತಿದ್ದೇವೆ. ಅವರು ನಮ್ಮ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಮತ್ತು ನಮ್ಮ ಗೆಳೆಯ ಅಥವಾ ಗೆಳತಿ ಯಾರೆಂದು ತಿಳಿಯಲು ಬಯಸುತ್ತಾರೆ. ಅವರು ನಮ್ಮ ಮದುವೆ ಮತ್ತು ಇತರ ವೈಯಕ್ತಿಕ ವಿಷಯಗಳ ಬಗ್ಗೆ ಕೇಳುತ್ತಲೇ ಇರುತ್ತಾರೆ” ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಆರೋಪವನ್ನು ಅಲ್ಲಗೆಳೆದಿದ್ದು, ಯಾವುದೇ ತಪ್ಪುಗಳನ್ನು ಎಸಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಗದ್ದಲದ ನಡುವೆ, ಕೇಂದ್ರ ಕ್ರೀಡಾ ಸಚಿವಾಲಯವು ಬುಧವಾರ ವಿಷಯದ ಬಗ್ಗೆ ಮಾಹಿತಿ ಪಡೆದುಕೊಂಡಿದೆ ಮತ್ತು ಫೆಡರೇಶನ್ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಮುಂದಿನ 72 ಗಂಟೆಗಳ ಒಳಗೆ WFI ನಿಂದ ವಿವರಣೆಯನ್ನು ಕೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top