News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2021ಕ್ಕೆ ಹೋಲಿಸಿದರೆ ದೇಶಿಯ ವಿಮಾನ ಪ್ರಯಾಣಿಕರ ದಟ್ಟಣೆ 47.05% ಹೆಚ್ಚಳ

ನವದೆಹಲಿ: 2021ರ ಜನವರಿಯಿಂದ ಡಿಸೆಂಬರ್‌ವರೆಗೆ ಹೋಲಿಸಿದರೆ 2022ರ ಜನವರಿಯಿಂದ ಡಿಸೆಂಬರ್‌ವರೆಗೆ ದೇಶೀಯ ವಿಮಾನ ಪ್ರಯಾಣಿಕರ ದಟ್ಟಣೆಯು  ಶೇಕಡಾ 47.05 ರಷ್ಟು ವಾರ್ಷಿಕ ಬೆಳವಣಿಗೆಯನ್ನು ದಾಖಲಿಸಿದೆ ಎಂದು ವರದಿ ತಿಳಿಸಿದೆ.

ವರದಿಯ ಪ್ರಕಾರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು 2022 ರ ಜನವರಿಯಿಂದ ಡಿಸೆಂಬರ್‌ನಲ್ಲಿ ದೇಶೀಯ ವಿಮಾನಯಾನ ಸಂಸ್ಥೆಗಳು ಸಾಗಿಸಿದ ಪ್ರಯಾಣಿಕರ ಸಂಖ್ಯೆ 1232.45 ಲಕ್ಷಗಳು ಎಂದು ಹೇಳಿದೆ. 2021 ರ ಜನವರಿಯಿಂದ ಡಿಸೆಂಬರ್‌ವರೆಗೆ ಈ ಸಂಖ್ಯೆ 838.14 ಲಕ್ಷಗಳಾಗಿತ್ತು.

DGCA ಪ್ರಕಾರ, ಕಳೆದ ತಿಂಗಳ ಅವಧಿಯಲ್ಲಿ ನಿಗದಿತ ದೇಶೀಯ ವಿಮಾನಯಾನ ಸಂಸ್ಥೆಗಳಿಂದ ಒಟ್ಟು 408 ಪ್ರಯಾಣಿಕರಿಗೆ ಸಂಬಂಧಿಸಿದ ದೂರುಗಳು ಬಂದಿವೆ. ಈ ದೂರುಗಳಿಗೆ ಪ್ರಮುಖ ಕಾರಣಗಳೆಂದರೆ ವಿಮಾನ ಸಮಸ್ಯೆಗಳು ಮತ್ತು ಮರುಪಾವತಿಗಳಾಗಿವೆ ಎಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top