News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೋಜ್‌ಗಾರ್‌ ಮೇಳ: 71,000 ನೇಮಕಾತಿ ಪತ್ರಗಳನ್ನು ವಿತರಿಸಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರೋಜ್‌ಗಾರ್ ಮೇಳ ಉಪಕ್ರಮದ ಅಡಿಯಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇದು 2023 ರ ಮೊದಲ ರೋಜ್‌ಗಾರ್ ಮೇಳವಾಗಿದ್ದು, 71,000 ಕುಟುಂಬಗಳಿಗೆ ಉದ್ಯೋಗದ ಅಮೂಲ್ಯ ಕೊಡುಗೆಯನ್ನು ಸರ್ಕಾರಕ್ಕೆ ತಂದುಕೊಡುತ್ತದೆ ಎಂದಿದ್ದಾರೆ.

ಹೊಸ ನೇಮಕಗೊಂಡವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು ಮತ್ತು ಈ ಉದ್ಯೋಗಾವಕಾಶಗಳು ನೇಮಕಗೊಂಡವರಲ್ಲಿ ಮಾತ್ರವಲ್ಲದೆ ಕೋಟ್ಯಂತರ ಕುಟುಂಬಗಳಲ್ಲಿ ಹೊಸ ಭರವಸೆಯ ಕಿರಣವನ್ನು ತುಂಬುತ್ತದೆ ಎಂದರು.

ಅಸ್ಸಾಂ ಸರ್ಕಾರ ನಿನ್ನೆಯಷ್ಟೇ ರೋಜ್‌ಗಾರ್ ಮೇಳವನ್ನು ಆಯೋಜಿಸಿದ್ದು, ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಾಖಂಡ ರಾಜ್ಯಗಳು ಶೀಘ್ರದಲ್ಲೇ ಆಯೋಜಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ನಿಯಮಿತ ರೋಜ್‌ಗಾರ್ ಮೇಳಗಳು ನಮ್ಮ ಸರ್ಕಾರದ ಗುರುತಾಗಿದೆ. ನಮ್ಮ ಸರ್ಕಾರವು ಯಾವುದೇ ನಿರ್ಣಯವನ್ನು ತೆಗೆದುಕೊಂಡರೂ ಅದು ಕಾರ್ಯರೂಪಕ್ಕೆ ಬರುತ್ತದೆ ಎಂದಿದ್ದಾರೆ.

ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಜೂನಿಯರ್ ಇಂಜಿನಿಯರ್‌ಗಳು, ಲೋಕೋ ಪೈಲಟ್‌ಗಳು, ತಂತ್ರಜ್ಞರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್, ಸ್ಟೆನೋಗ್ರಾಫರ್‌ಗಳು, ಜೂನಿಯರ್ ಅಕೌಂಟೆಂಟ್, ಗ್ರಾಮೀಣ ಅಂಚೆ ಸೇವಕರು, ಶಿಕ್ಷಕ, ನರ್ಸ್, ವೈದ್ಯರು, ಸಾಮಾಜಿಕ ಭದ್ರತಾ ಅಧಿಕಾರಿ, ಪಿಎ, ಆದಾಯ ತೆರಿಗೆ ಇನ್‌ಸ್ಪೆಕ್ಟರ್‌ನಂತಹ ವಿವಿಧ ಹುದ್ದೆಗಳನ್ನು ಒಳಗೊಂಡಿದೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯ ಈಡೇರಿಕೆಗೆ ರೋಜ್‌ಗಾರ್ ಮೇಳ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಪಿಎಂಒ ತಿಳಿಸಿದೆ.

ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ  ಅವಕಾಶಗಳನ್ನು ಒದಗಿಸುತ್ತದೆ ಎಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top