ನವದೆಹಲಿ: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮಕ್ಕೆ ನಿಷೇಧ ಹೇರಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಈ ಕಾರ್ಯಕ್ರಮ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಇದಕ್ಕೆ ನಿಷೇಧ ಹೇರಬೇಕು ಎಂದು ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಮನವಿ ಮಾಡಿಕೊಂಡಿದ್ದವು.
ಆದರೆ ಚುನಾವಣಾ ಆಯೋಗ ಇದನ್ನು ತಿರಸ್ಕರಿಸಿದ್ದು, ಈ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘಿಸುವ ಅಂಶವಿದ್ದರೆ ನಾವೇ ಸ್ವಯಂಪ್ರೇರಿತವಾಗಿ ಕ್ರಮಕೈಗೊಳ್ಳುತ್ತೇವೆ. ಆದರೆ ಇಡೀ ಕಾರ್ಯಕ್ರಮಕ್ಕೆ ನಿಷೇಧ ಹೇರಲು ಸಾಧ್ಯವಿಲ್ಲ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.