News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫೆಬ್ರವರಿ 10ರಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ

ಬೆಂಗಳೂರು: ಪ್ರಸಕ್ತ ವರ್ಷದ ವಿಧಾನ ಮಂಡಲದ ಬಜೆಟ್ ಅಧಿವೇಶನವನ್ನು ಫೆಬ್ರವರಿ 10ರಿಂದ ನಡೆಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, “ಫೆಬ್ರವರಿ 10ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ರವರೆಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವ ಸಾಧ್ಯತೆ ಇದೆ” ಎಂದಿದ್ದಾರೆ.

ಅಧಿವೇಶನದ ಮುಕ್ತಾಯದ ದಿನ ಇನ್ನೂ ನಿರ್ಧರಿಸಲಾಗಿಲ್ಲ, ವಿಧಾನಮಂಡಲದ ಉಭಯ ಸದನಗಳ ಕಲಾಪ ಸಲಹಾ ಸಮಿತಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top