News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 2nd February 2023


×
Home About Us Advertise With s Contact Us

ಕೇರಳ: ನಿಷೇಧಿತ ಪಿಎಫ್‌ಐ ನಾಯಕರ ಆಸ್ತಿ ಮುಟ್ಟುಗೋಲು

ತಿರುವನಂತಪುರಂ: ಕೇರಳ ಹೈಕೋರ್ಟ್‌ನ ಆದೇಶದ ಮೇರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರು ಮತ್ತು ಕಾರ್ಯಕರ್ತರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯವನ್ನು ಕೇರಳ ಸರ್ಕಾರ ಆರಂಭಿಸಿದೆ.

ಪಿಎಫ್‌ಐ ಕಾರ್ಯಕರ್ತರಿಂದ 5.20 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಕಳೆದ ವರ್ಷ ಸೆಪ್ಟೆಂಬರ್ 23 ರಂದು ಕಾನೂನುಬಾಹಿರ ಸಂಘಟನೆಯೆಂದು ಪಿಎಫ್‌ಐ ಅನ್ನು ಘೋಷಿಸಲಾಗಿದೆ.

ಕಂದಾಯ ಅಧಿಕಾರಿಗಳು ಪೊಲೀಸರ ನೆರವಿನಿಂದ ರಾಜ್ಯದ ಏಳು ಜಿಲ್ಲೆಗಳಲ್ಲಿ  ಪಿಎಫ್‌ಐ ಪದಾಧಿಕಾರಿಗಳಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ, ಅದರ ಪ್ರಧಾನ ಕಾರ್ಯದರ್ಶಿ ಎ ಅಬ್ದುಲ್ ಸತಾರ್ ಮತ್ತು ಮಾಜಿ ರಾಜ್ಯ ಕಾರ್ಯದರ್ಶಿ ಸಿ ಎ ರೌಫ್‌ಗೆ ಈ ಆಸ್ತಿಗಳು ಸೇರಿವೆ.

ಸಂಘಟನೆಯನ್ನು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ  ಸಾರ್ವಜನಿಕ ಆಸ್ತಿಯನ್ನು ದೊಡ್ಡ ಪ್ರಮಾಣದಲ್ಲಿ ನಾಶಪಡಿಸಿದ್ದರು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ನ್ಯಾಯಾಲಯ ಕೂಡ ಸರ್ಕಾರಕ್ಕೆ ಛಾಟಿ ಬೀಸಿತ್ತು.

ತನ್ನ ಆದೇಶವನ್ನು ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಸಂಬಂಧ ಸೋಮವಾರದೊಳಗೆ ಜಪ್ತಿ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ನ್ಯಾಯಾಲಯವು ಮಂಗಳವಾರ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿದೆ. ಪಿಎಫ್‌ಐ ಕಾರ್ಯಕರ್ತರಿಂದ ಆಗುವ ಹಾನಿಯ ವೆಚ್ಚವನ್ನು ಅರಿತುಕೊಳ್ಳದೆ ಅವರಿಗೆ ಜಾಮೀನು ನೀಡದಂತೆ ಹೈಕೋರ್ಟ್ ಈ ಹಿಂದೆ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top