News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪನಮನ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಚಿವ ಡಾ. ಅಶ್ವತ್ಥನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಪಕ್ಷದ ಮುಖಂಡರು, ಶಾಸಕರು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು.

ನಡ್ಡಾ ಅವರು ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ. ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ಭಾಗವಹಿಸಲಿದ್ದಾರೆ.

ಬಳಿಕ ಸಿಂಧಗಿಗೆ ತೆರಳುವ ಅವರು ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಕಲ್ಬುರ್ಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top