News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರ ಹಂಚಲು ಟ್ವಿಟರ್‌ಗೆ ಕೇಂದ್ರ ನಿರ್ಬಂಧ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬಿಬಿಸಿ ಪ್ರಸಾರ ಮಾಡಿರುವ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ಹಂಚಿಕೊಳ್ಳುವ ಯೂಟ್ಯೂಬ್ ವೀಡಿಯೊಗಳು ಮತ್ತು ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಕೇಂದ್ರವು ನಿರ್ದೇಶನಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಶುಕ್ರವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ನಿರ್ದೇಶನಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ವಿದೇಶಾಂಗ ವ್ಯವಹಾರಗಳು, ಗೃಹ ವ್ಯವಹಾರಗಳು ಮತ್ತು ಮಾಹಿತಿ ಮತ್ತು ಪ್ರಸಾರ ಸೇರಿದಂತೆ ಹಲವಾರು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಸಾಕ್ಷ್ಯಚಿತ್ರವನ್ನು ಪರಿಶೀಲಿಸಿದ್ದಾರೆ. ವಿವಿಧ ಭಾರತೀಯ ಸಮುದಾಯಗಳಲ್ಲಿ ವಿಭಜನೆಯನ್ನು ಬಿತ್ತುವ ಉದ್ದೇಶವನ್ನು ಈ ಸಾಕ್ಷ್ಯಚಿತ್ರ ಹೊಂದಿದೆ ಎಂಬುದು ತಿಳಿದುಬರುತ್ತದೆ. ಹೀಗಾಗಿ ಅದರ ಲಿಂಕ್‌ ಬಿತ್ತರಿಸದಂತೆ ನಿರ್ಬಂಧ ಹೇರಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ

ಸಾಕ್ಷ್ಯಚಿತ್ರವು ಭಾರತದ ಸಾರ್ವಭೌಮತ್ವವನ್ನು ಹಾಳುಮಾಡುತ್ತದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಸಾಕ್ಷ್ಯಚಿತ್ರವು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ವಿದೇಶಿ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧಗಳು ಮತ್ತು ದೇಶದೊಳಗಿನ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಭಿಪ್ರಾಯಿಸಿದ್ದಾರೆ ಎಂದಿದ್ದಾರೆ.

ಸಂಬಂಧಪಟ್ಟ ಯೂಟ್ಯೂಬ್ ವೀಡಿಯೊಗಳ ಲಿಂಕ್‌ಗಳನ್ನು ಹೊಂದಿರುವ 50 ಕ್ಕೂ ಹೆಚ್ಚು ಟ್ವೀಟ್‌ಗಳನ್ನು ನಿರ್ಬಂಧಿಸಲು ಟ್ವಿಟರ್‌ಗೆ ಆದೇಶಗಳನ್ನು ನೀಡಲಾಗಿದೆ, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ನಿರ್ದೇಶನಗಳನ್ನು ಅನುಸರಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಿಬಿಸಿ ಸಾಕ್ಷ್ಯಚಿತ್ರವನ್ನು “ಪ್ರಚಾರದ ತುಣುಕು” ಎಂದಿತ್ತು, ಅದು ವಸ್ತುನಿಷ್ಠತೆಯ ಕೊರತೆ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದಿತ್ತು.

ಗುಜರಾತ್‌ ಗಲಭೆಗೆ ಮೋದಿಯನ್ನು ಹೊಣೆಯನ್ನಾಗಿಸುವ ಪ್ರಯತ್ನವನ್ನು ಸಾಕ್ಷ್ಯಚಿತ್ರ ಮಾಡಿದೆ ಎನ್ನಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top