News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಅಂಡಮಾನ್ & ನಿಕೋಬಾರ್‌ನ 21 ದ್ವೀಪಗಳಿಗೆ ವೀರರ ಹೆಸರು ನಾಮಕರಣ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 21 ದೊಡ್ಡ  ದ್ವೀಪಗಳಿಗೆ ನಾಮಕರಣ ಮಾಡುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ಅನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಾಳೆ ಹೆಸರಿಲ್ಲದ  ದ್ವೀಪಗಳಿಗೆ  ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗುತ್ತದೆ.

ಮೇಜರ್ ಸೋಮನಾಥ ಶರ್ಮಾ, ನಾಯಕ್ ಜಾದುನಾಥ್ ಸಿಂಗ್, ಕಂಪನಿ ಹವಾಲ್ದಾರ್ ಮೇಜರ್ ಪೀರು ಸಿಂಗ್, ಲ್ಯಾನ್ಸ್ ನಾಯಕ್ ಆಲ್ಬರ್ಟ್ ಎಕ್ಕಾ, ಮೇಜರ್ ರಾಮಸ್ವಾಮಿ ಪರಮೇಶ್ವರನ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ ಮತ್ತು ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ಸೇರಿದಂತೆ 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಈ ದ್ವೀಪಗಳಿಗೆ ಇಡಲಾಗುತ್ತದೆ.

ರಾಷ್ಟ್ರದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಲು ಅಪ್ರತಿಮ ತ್ಯಾಗ ಮಾಡಿದ ದೇಶದ ವೀರರಿಗೆ ಈ ನಿರ್ಧಾರ ಶಾಶ್ವತ ಗೌರವವಾಗಿದೆ.

ಕಾರ್ಯಕ್ರಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಿರುವ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ 2018ರಲ್ಲಿ ರಾಸ್ ದ್ವೀಪಗಳನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ. ನೀಲ್ ದ್ವೀಪ ಮತ್ತು ಹ್ಯಾವ್ಲಾಕ್ ದ್ವೀಪವನ್ನು ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top