News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ನೇತಾಜೀ ಜನ್ಮದಿನ: ಪರಾಕ್ರಮ್‌ ದಿವಸ್‌ ಆಚರಣೆ

ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಶಾಶ್ವತವಾಗಿ ಬರೆಯಲ್ಪಡುವ ಹೆಸರುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಕೂಡ ಒಬ್ಬರು. ಅವರು ದೇಶಕ್ಕಾಗಿ ದುಡಿದ ರೀತಿ, ಬ್ರಿಟಿಷರ ವಿರುದ್ಧ ದೇಶವಾಸಿಗಳನ್ನು ಕೆರಳಿಸಿದ ರೀತಿ ಬೇರೆ ಯಾವ ವ್ಯಕ್ತಿಗೂ ಸಾಧ್ಯವಾಗಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ಅವರ ಸಾವಿನ ಬಗ್ಗೆ ಹಲವು ಅನುಮಾನಗಳಿದ್ದರೂ ಅವರು ಬಿತ್ತಿ ಹೋದ ದೇಶಭಕ್ತಿ ಎಂದಿಗೂ ಸಾಯುವುದಿಲ್ಲ. ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಅವರು ಶಾಶ್ವತವಾಗಿ ಇರುತ್ತಾರೆ.

ಇಂದು ಜನವರಿ 23, ಇಡೀ ರಾಷ್ಟ್ರವು ಅವರ ಜನ್ಮದಿನದಂದು ಅವರನ್ನು ನೆನಪಿಸಿಕೊಳ್ಳುತ್ತಿದೆ. ಈ ದಿನದಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಆಚರಿಸಲಾಗುತ್ತದೆ, ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪರಾಕ್ರಮ್ ದಿವಸ್ ಎಂದು ಘೋಷಿಸಿದ್ದಾರೆ.  ಈ ವಿಶೇಷ ದಿನದಂದು ನೇತಾಜಿ ಅವರಿಗೆ ರಾಷ್ಟ್ರ ವಿಶೇಷ ಗೌರವ ಸಲ್ಲಿಸುತ್ತಿದೆ.

ಟ್ವಿಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಇಂದು, ಪರಾಕ್ರಮ್ ದಿವಸ್‌, ನಾನು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಭಾರತದ ಇತಿಹಾಸಕ್ಕೆ ಅವರ ಅಪ್ರತಿಮ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತೇನೆ. ವಸಾಹತುಶಾಹಿ ಆಳ್ವಿಕೆ ವಿರುದ್ಧ ಅವರ ತೀವ್ರ ಪ್ರತಿರೋಧಕ್ಕಾಗಿ ಅವರನ್ನು ಸದಾ ಸ್ಮರಿಸಲಾಗುತ್ತದೆ. ಭಾರತಕ್ಕಾಗಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ” ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top