ಭೋಪಾಲ್: ನ್ಯೂಜಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕಾಗಿ ಮಧ್ಯಪ್ರದೇಶದಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಸದಸ್ಯರಲ್ಲಿ ಕೆಲವರು ಸೋಮವಾರ ಬೆಳಿಗ್ಗೆ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಆಟಗಾರರಾದ ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಸೋಮವಾರ ಮುಂಜಾನೆ ಭಾರತೀಯ ಕ್ರಿಕೆಟ್ ತಂಡದ ಸಿಬ್ಬಂದಿಯೊಂದಿಗೆ ಮಹಾಕಾಲ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ತಮ್ಮ ಸಹ ಆಟಗಾರ ರಿಷಭ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಮಹಾಕಾಲನಿಗೆ ಪ್ರಾರ್ಥಿಸಿದ್ದೇವೆ ಎಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟಿಗರಾದ ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಬಾಬಾ ಮಹಾಕಾಲನಿಗೆ ಭಸ್ಮ ಆರತಿ ಮಾಡಿದರು.
ಇದಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್ ಅವರು ಇದ್ದರು ಎಂದು ವರದಿಗಳು ತಿಳಿಸಿವೆ.
Madhya Pradesh | Indian cricketers Suryakumar Yadav, Kuldeep Yadav, and Washington Sundar visited Mahakaleshwar temple in Ujjain and performed Baba Mahakal's Bhasma Aarti. pic.twitter.com/nnyFRLMbfa
— ANI (@ANI) January 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.