News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು-ಕಾಶ್ಮೀರದಲ್ಲಿ 879 ಕೋಟಿ ರೂ ಆಹಾರ ಸಂಸ್ಕರಣಾ ಯೋಜನೆ ಆರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡುವ ಮತ್ತು ರೈತರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಿದೆ.

ಅಧಿಕೃತ ಹೇಳಿಕೆಯ ಪ್ರಕಾರ, 879.75 ಕೋಟಿ ರೂಪಾಯಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಯೋಜನೆಯನ್ನು ಜಮ್ಮು-ಕಾಶ್ಮೀರ ಆಡಳಿತ ಜಾರಿಗೊಳಿಸುತ್ತಿದೆ.

ಐದು ವರ್ಷಗಳಲ್ಲಿ ವೆಚ್ಚ, ಗುಣಮಟ್ಟ, ಬ್ರ್ಯಾಂಡಿಂಗ್ ಮತ್ತು ಸುಸ್ಥಿರತೆಯ ವಿಷಯದಲ್ಲಿ ಗುರುತಿಸಲಾದ ಏಳು ಉತ್ಪನ್ನಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಈ ಸಮಗ್ರ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ಗುರಿಯನ್ನು ಸಾಧಿಸಲು ಸರ್ಕಾರವು ವಿವಿಧ ಕೃಷಿ, ತೋಟಗಾರಿಕೆ ಮತ್ತು ಜಾನುವಾರು ಉತ್ಪನ್ನಗಳ ಮೌಲ್ಯವರ್ಧನೆ, ಲಾಜಿಸ್ಟಿಕ್ಸ್, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್‌ನಲ್ಲಿ ಹೂಡಿಕೆ ಮಾಡುತ್ತಿದೆ.

ಯೋಜನೆಯು ಜಮ್ಮು ಮತ್ತು ಕಾಶ್ಮೀರದ 17 ಜಿಲ್ಲೆಗಳನ್ನು ಸಂಸ್ಕರಣೆ ಮತ್ತು ಮಾರುಕಟ್ಟೆ ಮೂಲಸೌಕರ್ಯಗಳ ಸ್ಥಾಪನೆಯೊಂದಿಗೆ ಅಭಿವೃದ್ಧಿಪಡಿಸಲಿದೆ,

ಬಾಸ್ಮತಿ, ಅಣಬೆಗಳು, ಹಾಲು, ಮಾಂಸ ಮುಂತಾದ ಆಹಾರಗಳ ಸಂಸ್ಕರಣೆಗೆ ಇದು ಹೆಚ್ಚಿನ ಒತ್ತು ನೀಡಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top