News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾಲ್ಯ ವಿವಾಹದ ವಿರುದ್ಧ ಅಭಿಯಾನ ಪ್ರಾರಂಭಿಸುತ್ತಿದೆ ಅಸ್ಸಾಂ

ಗುವಾಹಟಿ: ಅಸ್ಸಾಂ ಸರ್ಕಾರವು ಶೀಘ್ರದಲ್ಲೇ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ

ಬಾಲ್ಯವಿವಾಹದ ವಿರುದ್ಧ ಅಸ್ಸಾಂನಲ್ಲಿ ಶೀಘ್ರದಲ್ಲೇ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಮೂಲಗಳು ಮಾಹಿತಿ ನೀಡಿವೆ.

ನಿನ್ನೆ ಗುವಾಹಟಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯನ್ನು ಬಾಲ್ಯ ವಿವಾಹ ತಡೆ (ನಿಷೇಧ) ಅಧಿಕಾರಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಬಾಲ್ಯವಿವಾಹಗಳನ್ನು ತಡೆಯಲು ಪೋಸ್ಕೊ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬಾಲ್ಯವಿವಾಹ ತಡೆಗಟ್ಟುವ ಜತೆಗೆ ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ತಗ್ಗಿಸಲು ಒಟ್ಟು 2,197 ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಬಾಲ್ಯ ವಿವಾಹ ತಡೆ (ನಿಷೇಧ) ಅಧಿಕಾರಿಗಳನ್ನಾಗಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top