News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ.30 ರಂದು ಸರ್ವಪಕ್ಷ ಸಭೆ, ಫೆ.1ಕ್ಕೆ ಕೇಂದ್ರ ಬಜೆಟ್‌ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸರ್ಕಾರ ಜನವರಿ 30 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಉಭಯ ಸದನಗಳನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರವನ್ನು ಸಭೆಯಲ್ಲಿ ಸರ್ಕಾರ ಕೋರಲಿದೆ.

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಉಭಯ ಸದನಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಮೊದಲ ದಿನದಂದು ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು.  2023-24 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top