News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ – ಈಜಿಪ್ಟ್ ರಕ್ಷಣಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ಹೊಂದಿವೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ, ಭಾರತ ಮತ್ತು ಈಜಿಪ್ಟ್ ಸೈಬರ್ ಭದ್ರತೆ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಯುವ ವಿಷಯಗಳು ಮತ್ತು ಪ್ರಸಾರ ಕ್ಷೇತ್ರಗಳಲ್ಲಿ ಒಪ್ಪಂದಗಳನ್ನು ಉಭಯ ನಾಯಕರು ವಿನಿಮಯ ಮಾಡಿಕೊಂಡಿದ್ದಾರೆ.

ಸಭೆಯ ನಂತರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಿ ಮೋದಿ ಅವರು, ಭಯೋತ್ಪಾದನೆಯು ಮಾನವೀಯತೆಗೆ ಅತ್ಯಂತ ಗಂಭೀರವಾದ ಭದ್ರತಾ ಬೆದರಿಕೆಯಾಗಿದೆ ಮತ್ತು  ಭಾರತ ಮತ್ತು ಈಜಿಪ್ಟ್ ಪ್ರಪಂಚದಾದ್ಯಂತ ಭಯೋತ್ಪಾದನೆಯ ಪ್ರಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಎರಡೂ ರಾಷ್ಟ್ರಗಳು ದ್ವಿಪಕ್ಷೀಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿವೆ ಎಂದು  ಹೇಳಿದರು. ಎ

ಎರಡೂ ದೇಶಗಳಿಗೆ ರಕ್ಷಣಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಮೋದಿ ಹೇಳಿದರು.

ಭಾರತ – ಈಜಿಪ್ಟ್ ವ್ಯೂಹಾತ್ಮಕ ಪಾಲುದಾರಿಕೆಯು ರಾಜಕೀಯ, ರಕ್ಷಣೆ ಮತ್ತು ವೈಜ್ಞಾನಿಕ ಅಭಿವೃದ್ಧಿಗೆ ನಾಂದಿಯಾಗಬಹುದು ಎಂದು ಅವರು ಹೇಳಿದರು.

ರಕ್ಷಣಾ ಉದ್ಯಮಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮತ್ತು ಭಯೋತ್ಪಾದನಾ ನಿಗ್ರಹ ಮಾಹಿತಿ ಮತ್ತು ಗುಪ್ತಚರ ವಿನಿಮಯವನ್ನು ಹೆಚ್ಚಿಸಲು ಎರಡೂ ರಾಷ್ಟ್ರಗಳು ನಿರ್ಧರಿಸಿವೆ ಎಂದು ಪ್ರಧಾನಿ ಹೇಳಿದರು.

ಮುಂದಿನ ಐದು ವರ್ಷಗಳಲ್ಲಿ ಎರಡೂ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರವನ್ನು 12 ಬಿಲಿಯನ್ ಡಾಲರ್‌ಗೆ ಕೊಂಡೊಯ್ಯಲಿವೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ತಮ್ಮ ದೇಶದಲ್ಲಿ ಸಾಕಷ್ಟು ಹೂಡಿಕೆ ಅವಕಾಶಗಳು ಲಭ್ಯವಿರುವುದರಿಂದ ಈಜಿಪ್ಟ್‌ನಲ್ಲಿ ಭಾರತೀಯ ಕಂಪನಿಗಳ ಹೂಡಿಕೆಯನ್ನು ಹೆಚ್ಚಿಸಲು ಚರ್ಚೆ ನಡೆಸಲಾಯಿತು. ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರದಲ್ಲಿ ಸಹಕಾರವನ್ನು ಹೆಚ್ಚಿಸುವ ಕುರಿತು ಎರಡೂ ದೇಶಗಳು ಮಾತುಕತೆ ನಡೆಸಿವೆ ಎಂದು ಹೇಳಿದರು.

ಭಯೋತ್ಪಾದನೆ ಮತ್ತು ಆಮೂಲಾಗ್ರೀಕರಣದ ವಿರುದ್ಧ ಹೋರಾಟ ಮತ್ತು ಈಜಿಪ್ಟ್ ಮತ್ತು ಭಾರತದ ನಡುವೆ ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ಅಧ್ಯಕ್ಷ ಸಿಸಿ ಹೇಳಿದರು.

ಭಾರತಕ್ಕೆ ಮೂರು ದಿನಗಳ ಭೇಟಿಗಾಗಿ ಈಜಿಪ್ಟ್ ಅಧ್ಯಕ್ಷರು ನಿನ್ನೆ ಸಂಜೆ ನವದೆಹಲಿಗೆ ಆಗಮಿಸಿದ್ದು, ಭಾರತದ 74ನೇ ಗಣರಾಜ್ಯೋತ್ಸವದಂದು ಅಧ್ಯಕ್ಷ ಸಿಸಿ ಮುಖ್ಯ ಅತಿಥಿಯಾಗಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top