News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

13 ನೇ ರಾಷ್ಟ್ರೀಯ ಮತದಾರರ ದಿನ: ಮತದಾನದ ಮಹತ್ವ ಸಾರಿದ ರಾಷ್ಟ್ರಪತಿ

ನವದೆಹಲಿ: 13 ನೇ ರಾಷ್ಟ್ರೀಯ ಮತದಾರರ ದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ಭಾರತೀಯ ಚುನಾವಣಾ ಆಯೋಗವು ಕಾರ್ಯಕ್ರಮವನ್ನು ಆಯೋಜಿಸಿದೆ.

ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಯುವ ಮತದಾರರು ದೇಶದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಅವರು ಈಗ ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಇದು ಪ್ರಜಾಪ್ರಭುತ್ವಕ್ಕೆ ಉತ್ತಮ ಸಂಕೇತವಾಗಿದೆ” ಎಂದು ಹೇಳಿದರು.

ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದ್ದು, ವಿಶೇಷವಾಗಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಇದೊಂದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.

ಮುಂದಿನ ಚುನಾವಣೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುವಂತೆ ಸರ್ಕಾರ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರು ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಐದು ಯುವಕರಿಗೆ ಮತದಾರರ ಚೀಟಿ ವಿತರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು, ಮತದಾರರಾಗುವುದು ಒಂದು ಸುಯೋಗವಾಗಿದ್ದು, ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಯಶಸ್ವಿ ಪ್ರಜಾಪ್ರಭುತ್ವದ ಹಿಂದಿನ ಶಕ್ತಿ ಜನರು ಎಂದು ಹೇಳಿದರು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ಚುನಾವಣಾ ಆಯೋಗವನ್ನು ಶ್ಲಾಘಿಸಿದ ರಿಜಿಜು, ದೇಶದಲ್ಲಿ ಆಯೋಗವು ಕಾರ್ಯನಿರ್ವಹಿಸುತ್ತಿರುವ ರೀತಿ ಜಗತ್ತಿಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top