News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ

ನವದೆಹಲಿ: ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸುವ ಮೂಲಕ 74ನೇ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್‌ ಧನಕರ್‌ ಉಪಸ್ಥಿತರಿದ್ದರು.

ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು.

ರಾಜಪಥ್‌ ಕರ್ತವ್ಯಪಥ ಎಂದು ಮರುನಾಮಕರಣಗೊಂಡ ಬಳಿಕ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಇದಾಗಿದೆ. ಪರೇಡ್‌ನಲ್ಲಿ ದೇಶ ಶಕ್ತಿ ಅನಾವರಣಗೊಂಡಿದೆ.  ಈಜಿಪ್ಟ್‌ ಸೈನಿಕರು ಕೂಡ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top