News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ: ಸರ್ಕಾರದ ಸಾಧನೆಗೆ ಶ್ಲಾಘನೆ

ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲರೂ ಒಗ್ಗಟ್ಟಾಗಿ ಕರ್ನಾಟಕ ರಾಜ್ಯವನ್ನು ಸ್ವಸ್ಥ ಮತ್ತು ಸಮೃದ್ಧವಾಗಿಸೋಣ ಹಾಗೂ ದೇಶದ ಸಾರ್ವಭೌಮತ್ವ ಏಕತೆ ಮತ್ತು ಅಖಂಡತೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ ಗುರಿಯೊಂದಿಗೆ ಮೂಲಭೂತ ಸೇವೆಗಳನ್ನು ಒದಗಿಸಲು ವಿಭಿನ್ನ, ನವೀನ ಮತ್ತು ಸರ್ವರನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಅಗ್ರಗಣ್ಯ ಸ್ಥಾನದಲ್ಲಿದೆ ಎಂದು ರಾಜ್ಯಪಾಲರು ಶ್ಲಾಘಿಸಿದ್ದಾರೆ.

ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮವಹಿಸಲಾಗುತ್ತಿದೆ. ನವಭಾರತಕ್ಕಾಗಿ ನವ ಕರ್ನಾಟಕ ಧ್ಯೇಯದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯ ಅಮೃತಮಹೋತ್ಸದಡಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಅಮೃತ ಶಾಲೆ ಯೋಜ‌ನೆ ಸೇರಿ 14 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. 20-21 ನೇ ಸಾಲಿನ ಎಸ್’ಡಿಜಿ ಸೂಚ್ಯಂಕ ವರದಿಯಲ್ಲಿ 4 ನೇ ಸ್ಥಾನದಲ್ಲಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top