News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮ: ಯೋಗಿ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸನಾತನ ಧರ್ಮವು ಭಾರತದ ರಾಷ್ಟ್ರೀಯ ಧರ್ಮ ಎಂದಿದ್ದು, ಎಲ್ಲರೂ ಅದನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

ರಾಜಸ್ಥಾನದ ಭಿನ್ಮಾಲ್‌ನ ನೀಲಕಂಠ ಮಹಾದೇವ ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಯೋಧ್ಯೆಯ ರಾಮ ಮಂದಿರದ ರೀತಿಯಲ್ಲಿ ಹಾನಿಗೊಳಗಾದ ಪವಿತ್ರ ಸ್ಥಳಗಳನ್ನು ಪುನರ್‌ನಿರ್ಮಾಣ ಮಾಡಲು ಅಭಿಯಾನವನ್ನು ಪ್ರಾರಂಭಿಸುವಂತೆ ಸಿಎಂ ಯೋಗಿ ಅವರು ಜನರನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಎಂ ಯೋಗಿ ಮತ್ತು ಕೇಂದ್ರ ಜಲವಿದ್ಯುತ್ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರುದ್ರಾಕ್ಷಿ ಗಿಡಯನ್ನು ನೆಟ್ಟರು.

ಯಾವುದೇ ಅವಧಿಯಲ್ಲಿ ನಮ್ಮ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ್ದರೆ, 500 ವರ್ಷಗಳ ನಂತರ ಭವ್ಯವಾದ ರಾಮನ ಮಂದಿರ ನಿರ್ಮಾಣ ನಡೆಯುತ್ತಿರುವ ಅಯೋಧ್ಯೆಯ ಮಾದರಿಯಲ್ಲಿ ಅವುಗಳ ಜೀರ್ಣೋದ್ಧಾರಕ್ಕಾಗಿ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಯೋಗಿ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪರಂಪರೆಯನ್ನು ಗೌರವಿಸುವ ಮತ್ತು ಅದನ್ನು ಸಂರಕ್ಷಿಸುವ ಪ್ರತಿಜ್ಞೆಯನ್ನು ಇಡೀ ದೇಶಕ್ಕೆ ಮಾಡಿದ್ದಾರೆ. 1400 ವರ್ಷಗಳ ನಂತರ ಭಗವಾನ್ ನೀಲಕಂಠನ ದೇವಾಲಯವನ್ನು ಮತ್ತೊಮ್ಮೆ ಭವ್ಯವಾದ ರೀತಿಯಲ್ಲಿ ಜೀರ್ಣೋದ್ಧಾರ ಮಾಡಿರುವುದು ಪರಂಪರೆಯ ಗೌರವ ಮತ್ತು ರಕ್ಷಣೆಗೆ ಉದಾಹರಣೆಯಾಗಿದೆ” ಎಂದಿದ್ದಾರೆ.

ರಾಜಸ್ಥಾನವು ಧರ್ಮ, ಕರ್ಮ, ಭಕ್ತಿ, ಮತ್ತು ಶಕ್ತಿಯ ಸಮನ್ವಯದ ಕೇಂದ್ರ ಬಿಂದುವಾಗಿದೆ ಎಂದ ಸಿಎಂ,  ಧರ್ಮದ ನಿಜವಾದ ರಹಸ್ಯಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ರಾಜಸ್ಥಾನಕ್ಕೆ ಬರುವುದು ಅವಶ್ಯಕ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top