News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತವನ್ನು 3ನೇ ಅತಿದೊಡ್ಡ ಆರ್ಥಿಕತೆಯಾಗಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದು: ಅಮಿತ್‌ ಶಾ

ಹುಬ್ಬಳ್ಳಿ: ಕರ್ನಾಟಕ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಯ ವಿದ್ಯಾನಗರದ ಕೆಎಲ್‌ಇ ಸಂಸ್ಥೆ ಬಿವಿಬಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅವರು 25 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಅಮಿತ್ ಶಾ, “ಹುಬ್ಬಳ್ಳಿಯ ಲಿಂಗಾಯಿತ ಶಿಕ್ಷಣ ತಂತ್ರಜ್ಞಾನ ವಿಶ್ವವಿದ್ಯಾಲಯಕಳೆದ 75 ವರ್ಷಗಳಿಂದ ವಿಶ್ವ ದರ್ಜೆಯ ತಂತ್ರಜ್ಞಾನ ಶಿಕ್ಷಣದ ಕೇಂದ್ರವಾಗಿ ಸ್ಥಾಪಿತಗೊಂಡಿದೆ. ಇಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಗುರುತನ್ನು ಸ್ಥಾಪಿಸಿದ್ದಾರೆ” ಎಂದರು.

“ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಹೊಸ ಶಿಕ್ಷಣ ನೀತಿ ವ್ಯಾಪಕವಾದ ಪರಿವರ್ತನೆಯ ಜೊತೆಗೆ ರಚನಾತ್ಮಕ ರೀತಿಯಲ್ಲಿ ಓದಿನೊಂದಿಗೆ ಕ್ರೀಡೆಗೂ ಗಮನ ನೀಡುತ್ತಿದೆ” ಎಂದರು.

ವಿಶ್ವದಲ್ಲಿ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. ಈಗ ಭಾರತ ವಿಶ್ವದ ಐದನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. 2030ರ ವೇಳೆಗೆ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top