News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆನ್‌ಲೈನ್‌ ವೇದಿಕೆಗಳ ವಿರುದ್ಧ ದೂರು ಸಲ್ಲಿಸಲು ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಸಾಮಾಜಿಕ ಮಾಧ್ಯಮ ಮತ್ತು ಇತರ ಇಂಟರ್ನೆಟ್ ಆಧಾರಿತ ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಬಳಕೆದಾರರ ದೂರುಗಳನ್ನು ಪರಿಹರಿಸಲು ಕೇಂದ್ರವು ಮೂರು ಸಮಿತಿಗಳನ್ನು ಸ್ಥಾಪಿಸಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು 2021 ರಲ್ಲಿ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳ ಆಧಾರದ ಮೇಲೆ ಮೂರು ಕುಂದುಕೊರತೆ ಮೇಲ್ಮನವಿ ಸಮಿತಿ (GACs)ಗಳ ರಚನೆಗೆ ಸೂಚನೆ ನೀಡಿದೆ.

ಭಾರತದಲ್ಲಿ ಇಂಟರ್ನೆಟ್ “ಮುಕ್ತ, ಸುರಕ್ಷಿತ, ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ” ಎಂದು ಖಚಿತಪಡಿಸಿಕೊಳ್ಳಲು ಕುಂದುಕೊರತೆ ಮೇಲ್ಮನವಿ ಸಮಿತಿ ಒಟ್ಟಾರೆ ನೀತಿ ಮತ್ತು ಕಾನೂನು ಚೌಕಟ್ಟಿನ ಒಂದು ಭಾಗವಾಗಿರುತ್ತದೆ ಎಂದು ಸಚಿವಾಲಯ ಹೇಳಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಮತ್ತು ಆನ್‌ಲೈನ್ ಆಗಿರುತ್ತದೆ ಎಂದಿದೆ.

ಸಮಿತಿ ವರ್ಚುವಲ್ ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿದ್ದು ಅದು ಆನ್‌ಲೈನ್ ಮತ್ತು ಡಿಜಿಟಲ್‌ನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಮೇಲ್ಮನವಿ ಸಲ್ಲಿಸುವುದರಿಂದ ಹಿಡಿದು ಅದರ ನಿರ್ಧಾರದವರೆಗೆ ಸಂಪೂರ್ಣ ಮೇಲ್ಮನವಿ ಪ್ರಕ್ರಿಯೆಯನ್ನು ಡಿಜಿಟಲ್‌ನಲ್ಲಿ ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಈ ಹೊಸ ಮೇಲ್ಮನವಿ ಸಂಸ್ಥೆಯ ಮುಂದೆ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಇತರ ಆನ್‌ಲೈನ್ ಮಧ್ಯವರ್ತಿಗಳ ಕುಂದುಕೊರತೆ ಅಧಿಕಾರಿಯ ನಿರ್ಧಾರದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬಳಕೆದಾರರಿಗೆ ಅವಕಾಶವಿದೆ ಎಂದು ಸಚಿವಾಲಯ ತಿಳಿಸಿದೆ.

“ಸಮಿತಿಯು ಬಳಕೆದಾರರ ಮನವಿಯನ್ನು 30 ದಿನಗಳ ಅವಧಿಯಲ್ಲಿ ಪರಿಹರಿಸಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top