News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಳಗಾವಿಯಲ್ಲಿ ನಾಳೆಯಿಂದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ

ಬೆಂಗಳೂರು: ನಾಳೆಯಿಂದ ಜನವರಿ 30 ರವರೆಗೆ ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೆನ್ಸಿ ಕ್ಲಬ್‍ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

ಜನವರಿ 29ರಂದು ಮಧ್ಯಾಹ್ನ 12 ಗಂಟೆಗೆ ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷರಾದ ರಾಜಕುಮಾರ ಚಹರ್ ವಹಿಸಲಿದ್ದಾರೆ. ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜನವರಿ 30 ರಂದು ಸೋಮವಾರ ಮಧ್ಯಾಹ್ನ 12.30 ಗಂಟೆಗೆ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯ ಸಮಾರೋಪ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ ಜೀ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯದ ಕೃಷಿ ಸಚಿವರಾದ ಬಿ. ಸಿ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top