News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆಯಿಂದ ಸಂಸತ್ತಿನ ಬಜೆಟ್‌ ಅಧಿವೇಶನ: ಇಂದು ಸರ್ವಪಕ್ಷ ಸಭೆ

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ದಿನವಾದ ಇಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಉಭಯ ಸದನಗಳನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ, ಅಧಿವೇಶನದ ಸಮಯದಲ್ಲಿ ಸಂಸತ್ತಿನ ಉಭಯ ಸದನಗಳು ಸುಗಮವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಸಹಕಾರವನ್ನು ಕೋರಲಿದೆ.

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು.  2023-24 ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top