News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಫೆ 5-7ಕ್ಕೆ ಬೆಂಗಳೂರಿನಲ್ಲಿ ಜಿ20 ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಸಭೆ

ಬೆಂಗಳೂರು: ಫೆಬ್ರವರಿ 5ರಿಂದ 7ರವರೆಗೆ ಬೆಂಗಳೂರಿನಲ್ಲಿ ಜಿ20 ರಾಷ್ಟ್ರಗಳ ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಸಭೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವಾಲಯದ ಕಾರ್ಯದರ್ಶಿ ಅಲೋಕ್ ಕುಮಾರ್ ಅವರು, “ಭಾರತಕ್ಕೆ ಜಿ20 ಗುಂಪಿನ ಅಧ್ಯಕ್ಷತೆ ದೊರಕಿರುವುದರಿಂದ ದೇಶಾದ್ಯಂತ ಹಲವು ಸಭೆಗಳನ್ನು ಆಯಾಜಿಸಲಾಗುತ್ತಿದೆ. ಇದರ ಭಾಗವಾಗಿ ಇಂಧನ ಪರಿವರ್ತನೆಗೆ ಸಂಬಂಧಿಸಿದ ಸಭೆಯು ಬೆಂಗಳೂರಿನಲ್ಲಿ ನಿಗದಿಯಾಗಿದೆ. ಜಿ-20 ರಾಷ್ಟ್ರಗಳು ಹಾಗೂ ವಿಶ್ವ ಬ್ಯಾಂಕ್, ಏಷ್ಯಾ ಅಭಿವೃದ್ಧಿ ಬ್ಯಾಂಕ್, ವಿಶ್ವಸಂಸ್ಥೆ ಅಭಿವೃದ್ಧಿ ಯೋಜನೆ ಸೇರಿದಂತೆ ಅಂತರಾಷ್ಟ್ರೀಯ ಮಟ್ಟದ ಮುಂಚೂಣಿ ಸಂಸ್ಥೆಗಳು ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ” ಎಂದಿದ್ದಾರೆ.

ಇದು ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ ಮೊದಲ ಸಭೆಯಾಗಿದೆ.‌ ಸಭೆಯು ತಾಂತ್ರಿಕ ಅಡೆತಡೆಗಳನ್ನು ನಿವಾರಿಸುವ ಮೂಲಕ ಇಂಧನ ಪರಿವರ್ತನೆಗೆ ಕಡಿಮೆ ಬಡ್ಡಿದರದ ಹಣಕಾಸು, ಇಂಧನ ಸುರಕ್ಷತೆ ಮತ್ತು ಬಹು ವಿಧದ ಪೂರೈಕೆ ಜಾಲ, ಇಂಧನ ಸಾಮರ್ಥ್ಯ, ಕೈಗಾರಿಕೆಗಳಲ್ಲಿ ಕಡಿಮೆ ಇಂಗಾಲ ಹೊರಸೂಸುವಿಕೆ, ಪರಿವರ್ತನೆ ಮತ್ತು ಜವಾಬ್ದಾರಿಯುತ ಬಳಕೆ ಮುಂತಾದ ವಿಷಯಗಳ ಮೇಲೆ ಗಮನ ಕೇಂದ್ರೀಕರಿಸಲಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top