News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಧ್ಯಪ್ರದೇಶ: ʼಖೇಲೋ ಇಂಡಿಯಾ ಯೂತ್‌ ಗೇಮ್ಸ್‌ 2022ʼ ಆರಂಭ

ನವದೆಹಲಿ: ಐದನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ 2022 ನಿನ್ನೆ ಸಂಜೆ ಮಧ್ಯಪ್ರದೇಶದಲ್ಲಿ ಪ್ರಾರಂಭವಾಗಿದ್ದು, ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿವೆ.

ಭೋಪಾಲ್‌ನ ತಾತ್ಯಾ ಟೋಪಿ ನಗರ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಖೇಲೋ ಇಂಡಿಯಾ ಯೂತ್ ಗೇಮ್ಸ್-2022 ಅನ್ನು ಉದ್ಘಾಟಿಸಿದರು.

ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಠಾಕೂರ್, ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಕ್ರೀಡೆಯನ್ನು ಮುಂದಕ್ಕೆ ಕೊಂಡೊಯ್ಯಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಧಾನಮಂತ್ರಿ ಅವರೇ ಆಟಗಾರರನ್ನು ಭೇಟಿ ಮಾಡುವ ಮೂಲಕ ಅವರನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದರು.

ಈ ಆಟಗಳು ಬಡ ಕುಟುಂಬದ ಮಕ್ಕಳಿಗೂ ಮುನ್ನಡೆಯಲು ಅವಕಾಶ ಮಾಡಿಕೊಟ್ಟಿವೆ. ಈ ಆಟಗಳ ಮೂಲಕ ಈಗ ಸ್ಥಳೀಯ ಕ್ರೀಡೆಗಳು ಮತ್ತು ಪ್ರತಿಭೆಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸುತ್ತಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಖೇಲೋ ಇಂಡಿಯಾಗೆ 3200 ಕೋಟಿ ಬಜೆಟ್ ನೀಡಲಾಗುವುದು. ದೇಶದ ಕ್ರೀಡಾ ಬಜೆಟ್ ಕೂಡ ಎರಡು ಸಾವಿರ ಕೋಟಿಗೆ ಏರಿಕೆಯಾಗಿದೆ ಎಂದು ಠಾಕೂರ್ ಮಾಹಿತಿ ನೀಡಿದರು.

ಮಧ್ಯಪ್ರದೇಶದಲ್ಲಿ ಕ್ರೀಡಾ ಪಟುಗಳ ಪ್ರತಿಭೆಯನ್ನು ಹೆಚ್ಚಿಸಲು ಹಣದ ಕೊರತೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ 18 ಕ್ರೀಡೆಗಳಿಗೆ ಹನ್ನೊಂದು ಕ್ರೀಡಾ ಅಕಾಡೆಮಿ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯಕ್ಕೆ ಪದಕ ಗೆಲ್ಲುವ ಆಟಗಾರರಿಗೆ 5 ಲಕ್ಷ ರೂಪಾಯಿ ನೀಡಲಾಗುವುದು ಎಂದು ಚೌಹಾಣ್ ಘೋಷಿಸಿದರು.

ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಮತ್ತು ಅರುಣಾಚಲ ಪ್ರದೇಶದ ಕ್ರೀಡಾ ಸಚಿವೆ ಮಾಮಾ ನಟುಂಗ್ ಉಪಸ್ಥಿತರಿದ್ದರು.

ಖ್ಯಾತ ಹಿನ್ನೆಲೆ ಗಾಯಕರಾದ ಶಾನ್ ಮತ್ತು ನೀತಿ ಮೋಹನ್ ಅವರು ತಮ್ಮ ಇಂಪಾದ ಗಾಯನದ ಮೂಲಕ ಪ್ರೇಕ್ಷಕರನ್ನು ಪುಳಕಗೊಳಿಸಿದರು. ದಕ್ಷಿಣ ಭಾರತದ ಖ್ಯಾತ ಮೃದಂಗ ವಾದಕ ಶಿವಮಣಿ ಮತ್ತು ತಂಡದಿಂದ 100 ಜನಪದ ಕಲಾವಿದರು ಸೇರಿ ‘ಏಕ್ ಭಾರತ್-ಶ್ರೇಷ್ಠ ಭಾರತ್’ ಕಾರ್ಯಕ್ರಮ ನಡೆಸಿಕೊಟ್ಟರು.

ಆಟಗಳಲ್ಲಿ ಸುಮಾರು 300 ಚಿನ್ನದ ಪದಕಗಳು ಸೇರಿದಂತೆ 900 ಕ್ಕೂ ಹೆಚ್ಚು ಪದಕಗಳಿಗಾಗಿ ದೇಶಾದ್ಯಂತದ ಸುಮಾರು 6 ಸಾವಿರ ಆಟಗಾರರು ಸ್ಪರ್ಧಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top