ನವದೆಹಲಿ: ಪಾಕಿಸ್ಥಾನದ ಪೇಶಾವರದ ಮಸೀದಿಯೊಂದರಲ್ಲಿ ಜನವರಿ 30ರಂದು ನಮಾಝ್ ವೇಳೆ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 96 ಮಂದಿ ಸಾವನ್ನಪ್ಪಿದ್ದು, ಸ್ಫೋಟದಲ್ಲಿ ಗಾಯಗೊಂಡವರ ಸಂಖ್ಯೆ ಕನಿಷ್ಠ 221ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.
ಮಸೀದಿಯ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ರಕ್ಷಣಾ ಕಾರ್ಯಾಚರಣೆ ಮಂಗಳವಾರ ಮುಕ್ತಾಯಗೊಂಡಿದೆ. ಈ ನಡುವೆ, ಭಾರತವು ಆತ್ಮಾಹುತಿ ದಾಳಿಯನ್ನು ಖಂಡಿಸಿದ್ದು, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದೆ.
“ನಿನ್ನೆ ಪೇಶಾವರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ಭಾರತವು ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಲವಾರು ಜನರ ಪ್ರಾಣವನ್ನು ತೆಗೆದುಕೊಂಡ ಈ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿನ್ನೆ ಟ್ವೀಟ್‌ನಲ್ಲಿ ತಿಳಿಸಿದೆ.
ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಜೋಹ್ರ್ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಆ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಛಾವಣಿ ಕುಸಿದು ಬಿದ್ದಿದೆ. ಇದರಿಂದ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.
ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿ ನಿಂತಿದ್ದ. ಅಕ್ರಮ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
India extends its deep condolences to the families of the victims of the terror attack in Peshawar yesterday. We strongly condemn this attack, which has taken the lives of so many people.
— Randhir Jaiswal (@MEAIndia) January 31, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.