News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ 44,000 ಕೋಟಿ ರೂ ಹಂಚಿಕೆ: ಯುಜಿಸಿ ಅಧ್ಯಕ್ಷ ಪ್ರಶಂಸೆ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ 44,000 ಕೋಟಿ ರೂಪಾಯಿಗೂ ಅಧಿಕ ಹಣ ಮೀಸಲಿಡಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಅಧ್ಯಕ್ಷ ಮಾಮಿದಾಳ ಜಗದೀಶ್ ಕುಮಾರ್  ಹೇಳಿದ್ದಾರೆ.

ಇದು ಹಿಂದಿನ ವರ್ಷದ ಹಂಚಿಕೆಗಿಂತ ಶೇ.7.9ರಷ್ಟು ಅಧಿಕವಾಗಿದೆ ಎಂದ ಅವರು, ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾದ ಕಲಿಕೆಯ ನಷ್ಟವನ್ನು ನಿವಾರಿಸುವುದು ಮತ್ತು ಹೆಚ್ಚಿನ ಪ್ರವೇಶ ಮತ್ತು ಸಮಾನತೆಗಾಗಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಡಿಜಿಟಲ್ ತಂತ್ರಜ್ಞಾನವನ್ನು ಸೇರಿಸುವುದು ಆದ್ಯತೆಯಾಗಿದೆ ಎಂದಿದ್ದಾರೆ.

ಹೆಚ್ಚಿದ ನಿಧಿ ಹಂಚಿಕೆಯು ನೂತನ ಶಿಕ್ಷಣ ನೀತಿ 2020 ರ ಅನುಷ್ಠಾನವನ್ನು ವೇಗಗೊಳಿಸುತ್ತದೆ ಎಂದು ಯುಜಿಸಿ ಅಧ್ಯಕ್ಷರು ಹೇಳಿದ್ದಾರೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭಾಂಶವನ್ನು ತರುತ್ತದೆ ಮತ್ತು ಭಾರತವನ್ನು ಜ್ಞಾನ-ಆಧಾರಿತ ಆರ್ಥಿಕತೆಯನ್ನಾಗಿ ಮಾಡುವ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top