News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೇಘಾಲಯ: ಎಲ್ಲಾ 60 ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

ನವದೆಹಲಿ: ಮೇಘಾಲಯದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಎಲ್ಲಾ 60 ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದೆ. ರಾಜ್ಯದಲ್ಲಿ ಚುನಾವಣೆಗೆ ಜನವರಿ 31 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 7 ರವರೆಗೆ ನಾಮಪತ್ರ ಸಲ್ಲಿಸಬಹುದು.

ಟಿಎಂಸಿ, ಕಾಂಗ್ರೆಸ್ ಮತ್ತು ಎನ್‌ಪಿಪಿ ತಮ್ಮ ಎಲ್ಲಾ 60 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರೆ, ಯುಡಿಪಿ ಗರೋ ಹಿಲ್ಸ್‌ 15 ಅಭ್ಯರ್ಥಿಗಳು ಸೇರಿದಂತೆ ಒಟ್ಟು 45 ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ನಡುವೆ ರಾಣಿಕೋರ್ ಕ್ಷೇತ್ರದ 5 ಬಾರಿ ಶಾಸಕ ಮತ್ತು ಎನ್‌ಪಿಪಿ ಅಭ್ಯರ್ಥಿ ಮಾರ್ಟಿನ್ ಎಂ ಡಾಂಗೋ ನಿನ್ನೆ ಪಕ್ಷಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ದೊಡ್ಡ ಬಲ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಅವರು ಬಿಜೆಪಿ ನಾಯಕ ಮತ್ತು ಅಸ್ಸಾಂನ ಸಿಎಂ ಹೇಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿದ್ದರು ಮತ್ತು ಅಂದಿನಿಂದ ಅವರು ಪಕ್ಷಕ್ಕೆ ಹೋಗಬಹುದು ಎಂಬ ಊಹಾಪೋಹಗಳು ಹಬ್ಬಿದ್ದವು. ನಿನ್ನೆ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಮತ್ತೊಂದೆಡೆ, ಮುಂಬರುವ ಚುನಾವಣೆಗೆ ಖಾರ್ಕುಟ್ಟಾ ಕ್ಷೇತ್ರದಲ್ಲಿ ಬಿಜೆಪಿಯ ನಿರೀಕ್ಷೆಗೆ ಉತ್ತೇಜನ ಎಂಬಂತೆ, ಮಾಜಿ ಕಾಂಗ್ರೆಸ್ ಸದಸ್ಯ ಒಮಿಲೋ ಕೆ ಸಂಗ್ಮಾ ಅವರ 300 ಕ್ಕೂ ಹೆಚ್ಚು ಬೆಂಬಲಿಗರು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಒಮಿಲೋ ಅವರು ಕೆಲವು ದಿನಗಳ ಹಿಂದೆ ಕಾಂಗ್ರೆಸ್ ತೊರೆದು ತಮ್ಮ 38 ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top