News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಮದ್ಯ ಬಿಟ್ಟು ಹಾಲು ಕುಡಿಯಿರಿʼ: ಮದ್ಯದಂಗಡಿ ಮುಂದೆ ಹಸು ತಂದಿಟ್ಟ ಉಮಾ ಭಾರತಿ

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರು ಮದ್ಯಪಾನದ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ. ಮಧ್ಯ ಪ್ರದೇಶದ ಓರ್ಚಾ ನಗರದ ಮಧ್ಯದ ಅಂಗಡಿ ಮುಂದೆ ಅವರು ಹಸುವನ್ನು ತಂದು ಕಟ್ಟಿ ಹಾಕಿದ್ದಾರೆ. ಅಲ್ಲದೆ ಮದ್ಯ ಬಿಟ್ಟು ಹಾಲು ಕುಡಿಯಿರಿ ಎಂದು ಸಂದೇಶ ನೀಡಿದ್ದಾರೆ.

ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಬೇಕು, ಮದ್ಯ ಕುಡಿಸಿ ಹಣ ಗಳಿಸುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಅಲ್ಲದೇ ಪ್ರತಿಯೊಂದು ಮದ್ಯದಂಗಡಿಗಳನ್ನು ಗೋ ಶಾಲೆಗಳಾಗಿ ಪರಿವರ್ತಿಸಬೇಕು ಎಂದು ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಅವರು ಮದ್ಯದ ಅಂಗಡಿಯ ಮೇಲೆ ಸಗಣಿ ಎರಚಿದ್ದರು.

ಮಧ್ಯಪ್ರದೇಶದಲ್ಲಿ ಮದ್ಯಪಾನಕ್ಕೆ ಸಂಪೂರ್ಣ ನಿಷೇಧ ಇರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top