News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೆಜೆಎಂ: ಕಳೆದ 3 ವರ್ಷಗಳಲ್ಲಿ 7.81 ಕೋಟಿ ಗ್ರಾಮೀಣ ಮನೆಗಳಿಗೆ ನಲ್ಲಿ ನೀರು

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ 7.81 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳಿಗೆ ಜಲ ಜೀವನ್ ಮಿಷನ್ ಅಡಿಯಲ್ಲಿ ಟ್ಯಾಪ್ ವಾಟರ್ ಸಂಪರ್ಕಗಳನ್ನು ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಗುರುವಾರ ಲೋಕಸಭೆಗೆ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಸಚಿವರು, ಜನವರಿ 31, 2023 ರ ವೇಳೆ ದೇಶದ 19.36 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ ಸುಮಾರು 11.06 ಕೋಟಿ (ಶೇ. 57.12) ನಲ್ಲಿ ನೀರು ಸರಬರಾಜು ಇದೆ ಎಂದಿದ್ದಾರೆ.

ಜಲ ಜೀವನ್‌ ಮಿಷನ್ ಘೋಷಣೆಯ ಸಮಯದಲ್ಲಿ, 3.23 ಕೋಟಿ (ಶೇ. 17) ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕಗಳನ್ನು ಹೊಂದಿದ್ದವು ಎಂದಿದ್ದಾರೆ.

ಗೋವಾ, ತೆಲಂಗಾಣ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಾದ್ರಾ ಮತ್ತು ನಗರ ಹವೇಲಿ, ದಾಮನ್ ಮತ್ತು ದಿಯು, ಗುಜರಾತ್ ಮತ್ತು ಹರಿಯಾಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರತಿ ಗ್ರಾಮೀಣ ಮನೆಗಳಿಗೆ ನಲ್ಲಿ ನೀರನ್ನು ಒದಗಿಸಿವೆ.

ಕೇಂದ್ರ ಸರ್ಕಾರವು, ರಾಜ್ಯಗಳ ಸಹಭಾಗಿತ್ವದಲ್ಲಿ, ದೇಶದ ಪ್ರತಿ ಗ್ರಾಮೀಣ ಮನೆಗಳಿಗೆ ನಲ್ಲಿ ನೀರು ಸರಬರಾಜು ಮಾಡಲು ಆಗಸ್ಟ್ 2019 ರಿಂದ ಜಲ ಜೀವನ್‌ ಮಿಷನ್ ಅನ್ನು ಜಾರಿಗೊಳಿಸುತ್ತಿದೆ.

ಮಿಷನ್‌ನ ಅಂದಾಜು ವೆಚ್ಚವು 3.60 ಲಕ್ಷ ಕೋಟಿ ರೂಪಾಯಿಗಳಾಗಿದ್ದು ಅದರಲ್ಲಿ ಕೇಂದ್ರ ಪಾಲು 2.08 ಲಕ್ಷ ಕೋಟಿ ರೂಪಾಯಿಗಳು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top