News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ ಸಿಡಿಎಸ್‌

ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ (CDS) ಜನರಲ್ ಅನಿಲ್ ಚೌಹಾಣ್ ಅವರು ಇಂದು ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದು, ಯೋಧರೊಂದಿಗೆ ಸಂವಾದ ನಡೆಸಿದರು.

ಜನರಲ್ ಅನಿಲ್ ಚೌಹಾಣ್ ಅವರು ನಿನ್ನೆ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆ ಮತ್ತು ಸೇನೆಯ ಫಾರ್ವರ್ಡ್ ರಚನೆಗಳಿಗೆ ಭೇಟಿ ನೀಡಿದರು, ಅಲ್ಲಿ ಅವರು ಭದ್ರತಾ ಪರಿಸ್ಥಿತಿಯ ಬಗ್ಗೆ ವಿವರ ಪಡೆದರು ಎಂದು ಮೂಲಗಳು ತಿಳಿಸಿವೆ.

ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮರ್‌ದೀಪ್ ಸಿಂಗ್ ಅವರೊಂದಿಗೆ ಅನಿಲ್‌ ಚೌವ್ಹಾಣ್‌ ಮಾತುಕತೆ ನಡೆಸಿದರು. ಅಲ್ಲದೇ ಉತ್ತರ ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ನಿಯೋಜಿಸಲಾದ ಸೈನಿಕರನ್ನು ಭೇಟಿ ಮಾಡಿ ಅವರ ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚಿನಾರ್ ಯೋಧರ ವೃತ್ತಿಪರತೆಯನ್ನು ಶ್ಲಾಘಿಸಿದರು ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top