News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂಬೈ ಸ್ಪೋಟಿಸುವುದಾಗಿ ಎನ್‌ಐಎಗೆ ತಾಲಿಬಾನ್‌ ಹೆಸರಲ್ಲಿ ಇ-ಮೇಲ್‌: ತನಿಖೆ ಆರಂಭ

ಮುಂಬೈ: ತಾಲಿಬಾನಿ ಸದಸ್ಯ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಇಮೇಲ್ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮಹಾರಾಷ್ಟ್ರದ ವಿವಿಧ ನಗರಗಳನ್ನು ಅಲರ್ಟ್‌ನಲ್ಲಿ ಇರಿಸಲಾಗಿರುವ ಬೆಳವಣಿಗೆಯ ಬಗ್ಗೆ ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ.

“ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಬಣ್ಣಿಸಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿದ್ದಾನೆ” ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

ಬೆದರಿಕೆ ಮೇಲ್ ಬಂದ ನಂತರ, ಮುಂಬೈ ಪೊಲೀಸರೊಂದಿಗೆ ಎನ್‌ಐಎ ಸತ್ಯವನ್ನು ಬಹಿರಂಗಪಡಿಸಲು ಜಂಟಿ ತನಿಖೆಯನ್ನು ಪ್ರಾರಂಭಿಸಿದೆ.

ಈ ವರ್ಷದ ಜನವರಿಯಲ್ಲಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ  ಬೆದರಿಕೆ ಕರೆ ಬಂದಿದ್ದು, ಅದರಲ್ಲಿ ಅಪರಿಚಿತ ಕರೆ ಮಾಡಿದವ ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

ಮುಂಬೈ ಪೊಲೀಸರ ಪ್ರಕಾರ, ಶಾಲೆಯ  ದೂರವಾಣಿಗೆ ಸಂಜೆ 4:30 ಕ್ಕೆ ಕರೆ ಬಂದಿದೆ. ಕರೆ ಮಾಡಿದವರು ಶಾಲೆಯಲ್ಲಿ ಟೈಮ್ ಬಾಂಬ್ ಇಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

ಕಳೆದ ವರ್ಷವೂ ಇದೇ ರೀತಿಯ ಕರೆ ಬಂದಿತ್ತು

ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಗರದ ವಿವಿಧೆಡೆ ಬಾಂಬ್‌ಗಳನ್ನು ಇರಿಸಿರುವ ಬಗ್ಗೆಯೂ ಮಾಹಿತಿ ನೀಡುವ ಇದೇ ರೀತಿಯ ಕರೆ ಬಂದಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top