ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾದರು.
ಅವರು ಇಂದು ದುಬೈನ ಆಸ್ಪತ್ರೆಯಲ್ಲಿ 79 ನೇ ವಯಸ್ಸಿನಲ್ಲಿ ನಿಧನರಾದರು. ಅವರು 2016 ರಿಂದ ವೈದ್ಯಕೀಯ ಚಿಕಿತ್ಸೆಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಗರದಲ್ಲಿದ್ದರು ಎಂದು ವರದಿಗಳು ತಿಳಿಸಿವೆ.
ಸೇನಾ ಮುಖ್ಯಸ್ಥನಾಗಿದ್ದ ಮುಷರಫ್ 1999 ರಲ್ಲಿ ದಂಗೆಯ ಬಳಿಕ ಅಧಿಕಾರವನ್ನು ವಶಪಡಿಸಿಕೊಂಡು ಸುಮಾರು ಒಂದು ದಶಕದ ಕಾಲ ಪಾಕಿಸ್ತಾನವನ್ನು ಆಳಿದ್ದರು.
ಅವರು 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಆಗಿನ ಪ್ರಧಾನಿ ನವಾಜ್ ಷರೀಫ್ ಅವರ ವಿರುದ್ಧ ರಕ್ತಪಾತರಹಿತ ದಂಗೆ ನಡೆಸಿ, ಅಧಿಕಾರವನ್ನು ಕಿತ್ತುಕೊಂಡಿದ್ದರು. ಪರ್ವೇಜ್ ಅವರ ಮೇಲೆ 2007ರಲ್ಲಿ ಪಾಕಿಸ್ತಾನದಲ್ಲಿ ಸಾಂವಿಧಾನಿಕ ತುರ್ತು ಪರಿಸ್ಥಿತಿ ಬಲವಂತವಾಗಿ ಹೇರಿಕೆ, ದೇಶದ್ರೋಹ ಎಸಗಿದ ಆರೋಪವಿತ್ತು. ಈ ಸಂಬಂಧ ನವೆಂಬರ್ 19ರಂದು ವಿಚಾರಣೆ ನಂತರದಲ್ಲಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಲಾಗಿತ್ತು. ಅದರಂತೆ ಡಿಸೆಂಬರ್ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿತ್ತು.
ಸೇನಾ ಮುಖ್ಯಸ್ಥರಾಗಿದ್ದ ಅವರು 1999ರಲ್ಲಿ ಸೇನಾ ಬಲ ಬಳಸಿಕೊಂಡು ಬಳಿಕ 2001ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಆರಂಭಿಸಿ ಮುಖಭಂಗ ಅನುಭವಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.