News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದಕ್ಷಿಣ ಕನ್ನಡದ 3 ರೈಲು ನಿಲ್ದಾಣ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿ

ಮಂಗಳೂರು: ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಣೆ ಮಾಡಿದ್ದಾರೆ.

ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡದ ಮೂರು ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಆಯ್ಕೆ ಮಾಡಿರುವ ನೆಚ್ಚಿನ ಪ್ರಧಾನಿ  ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ನಳಿನ್ ಕುಮಾರ್ ಕಟೀಲು ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ದಾಖಲೆ ರೂ.7,561 ಕೋಟಿ ಅನುದಾನ ಒದಗಿಸುವ ಮೂಲಕ ಬಂಪರ್ ಕೊಡುಗೆಯನ್ನು ನೀಡಿರುವ ಕೇಂದ್ರ ಸರ್ಕಾರವು ಈಗಾಗಲೇ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಯ ಕುರಿತು ಟೆಕ್ನೊ-ಎಕೊನೋಮಿಕ್ ಫಿಸಿಬಲಿಟಿ ಅಧ್ಯಯನವನ್ನು ಪ್ರಾರಂಭಿಸಿದೆ. ಈ ಸಾಲಿನಲ್ಲಿ ರಾಜ್ಯ ರೈಲ್ವೆ ಯೋಜನೆಗಳಿಗೆ ನೀಡಿರುವ ಅನುದಾನವು 2014ಕ್ಕೆ ಹೋಲಿಸಿದಲ್ಲಿ 9 ಪಟ್ಟು ಅಧಿಕವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top