ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ʼಭಾರತ ಇಂಧನ ಸಪ್ತಾಹ-2023’ಕ್ಕೆ ಚಾಲನೆ ನೀಡಿದ್ದಾರೆ. ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಸಪ್ತಾಹ ಆಯೋಜನೆಗೊಂಡಿದೆ.
ಬೆಂಗಳೂರಿನ ಎಚ್ಎಎಲ್ನಿಂದ ಮಾದಾವರದಲ್ಲಿರುವ ಬಿಐಇಸಿ (ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ)ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಆಗಮಿಸಿದರು. ಅವರನ್ನು ಮುಖ್ಯಮಂತ್ರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಫೆಬ್ರವರಿ 6ರಿಂದ 8ರವರೆಗೆ ಇಂಧನ ಸಪ್ತಾಹ ಆಯೋಜಯಾಗಿದೆ. ಇದರ ಉದ್ಘಾಟನೆ ಬಳಿಕ ಪರಿಸರ ಇಂಧನದ ಹಲವು ಸಾಧ್ಯತೆಗಳನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ಸಮಾವೇಶದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಮೋದಿಯವರು ಅಡುಗೆಮನೆಗಳಲ್ಲಿ ಸುಲಭವಾಗಿ ಬಳಸಲು ಸಾಧ್ಯವಿರುವ ವಿಶಿಷ್ಟ ಟ್ವಿನ್ ಕುಕ್ಟಾಪ್ ಸೋಲಾರ್ ಕುಕ್ಕರ್ ಒಂದನ್ನು ಅನಾವರಣಗೊಳಿಸಿದರು.
ಭಾರತ ಇಂಧನ ಸಪ್ತಾಹದಲ್ಲಿ 30,000ಕ್ಕೂ ಹೆಚ್ಚು ಪ್ರತಿನಿಧಿಗಳು, 500ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಇಲ್ಲಿ ಚರ್ಚೆ ನಡೆಯಲಿದೆ.
Addressing the #IndiaEnergyWeek 2023 in Bengaluru. https://t.co/CmpRrAJiDC
— Narendra Modi (@narendramodi) February 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.