News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸುಪ್ರೀಂಗೆ 5 ಜಡ್ಜ್‌ಗಳ ನೇಮಕ: ಪ್ರಮಾಣ ವಚನ ಬೋಧಿಸಿದ ಸಿಜೆಐ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಇಂದು ಐವರು   ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು.

ರಾಜಸ್ಥಾನ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್,  ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಾಧೀಶ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಾದ ಮನೋಜ್ ಮಿಶ್ರಾ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ವಕೀಲರು ಹಾಗೂ ನೂತನ ನ್ಯಾಯಾಧೀಶರ ಕುಟುಂಬಸ್ಥರು ಉಪಸ್ಥಿತರಿದ್ದರು.

ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 32 ಕ್ಕೆ ಏರಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಐವರು ನ್ಯಾಯಮೂರ್ತಿಗಳ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಿತ್ತು

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top