News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

8.9 ಲಕ್ಷ ಚದರ ಕಿಲೋಮೀಟರ್‌ ತಲುಪಿದ ಭಾರತದ ಅರಣ್ಯ ವ್ಯಾಪ್ತಿ

ನವದೆಹಲಿ: ಭಾರತದ ಅರಣ್ಯ ಮತ್ತು ಮರಗಳ ವ್ಯಾಪ್ತಿಯು ಏರಿಕೆಯಾಗುತ್ತಿದ್ದು, ಇದು ಹಸಿರು ಬೆಳೆಸುವ ಸರ್ಕಾರದ ಪ್ರಯತ್ನಗಳನ್ನು ಸೂಚಿಸುತ್ತದೆ.  ಭಾರತದ ಸ್ಟೇಟ್ ಆಫ್ ದಿ ಫಾರೆಸ್ಟ್ ವರದಿ 2021 ರ ಪ್ರಕಾರ, ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು 8.9 ಲಕ್ಷ ಚದರ ಕಿಲೋಮೀಟರ್‌ಗಳನ್ನು ತಲುಪಿದೆ, ಇದು ಭಾರತದ ಒಟ್ಟು ಭೌಗೋಳಿಕ ಪ್ರದೇಶದ ಶೇಕಡಾ 24 ರಷ್ಟಿದೆ.

2019 ಕ್ಕೆ ಹೋಲಿಸಿದರೆ ಇದು 2261 ಚದರ ಕಿ.ಮೀ ಹೆಚ್ಚಳವನ್ನು ಸೂಚಿಸುತ್ತದೆ ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ದೇಶದ ಪಳೆಯುಳಿಕೆ ರಹಿತ ಇಂಧನ ಆಧಾರಿತ ಒಟ್ಟು ವಿದ್ಯುತ್ ಶಕ್ತಿಯ ಸ್ಥಾಪಿತ ಸಾಮರ್ಥ್ಯವು ಕಳೆದ ವರ್ಷ ಡಿಸೆಂಬರ್‌ಗೆ 174 ಗಿಗಾ ವ್ಯಾಟ್‌ಗಳಷ್ಟಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರವು ಹವಾಮಾನ ಬದಲಾವಣೆಯ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದ ಸಚಿವರು,  34 ರಾಜ್ಯಗಳು ಮತ್ತು ಕೇಂದ್ರಾಡಳಿತಗಳು ರಾಷ್ಟ್ರೀಯ ಕ್ರಿಯಾ ಯೋಜನೆಯ ಉದ್ದೇಶಗಳಿಗೆ ಅನುಗುಣವಾಗಿ ಹವಾಮಾನ ಬದಲಾವಣೆಯ ಕುರಿತು ರಾಜ್ಯ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿವೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top