News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭೂಕಂಪ ಪೀಡಿತ ಟರ್ಕಿಗೆ NDRF, ವೈದ್ಯಕೀಯ ತಂಡ ಕಳುಹಿಸುತ್ತಿದೆ ಭಾರತ

ನವದೆಹಲಿ: ಭೂಕಂಪ ಪೀಡಿತ ಟರ್ಕಿಗೆ ಭಾರತವು ಎನ್‌ಡಿಆರ್‌ಎಫ್ ಮತ್ತು ವೈದ್ಯಕೀಯ ತಂಡಗಳನ್ನು ಕಳುಹಿಸಿಕೊಡಲು ನಿರ್ಧರಿಸಿದೆ. ಈ ತಂಡಗಳು ಭೂಕಂಪ ಪೀಡಿತ ಟರ್ಕಿಗೆ ಶೋಧ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲಿವೆ.

ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ ಒಂದುವರೆ ಸಾವಿರಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.

ಭೂಕಂಪವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ಬೆನ್ನಲ್ಲೇ ತಂಡಗಳನ್ನು ಆ ದೇಶಗಳಿಗೆ ಕಳಿಸಿಕೊಡಲಾಗುತ್ತಿದೆ. ತಕ್ಷಣದ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಮಂತ್ರಿ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಇಂದು ಸಭೆ ನಡೆಸಿದರು ಎಂದು ವರದಿಗಳು ತಿಳಿಸಿವೆ.

“ಟರ್ಕಿ ಸರ್ಕಾರದ ಸಮನ್ವಯತೆಯೊಂದಿಗೆ NDRF ಮತ್ತು ವೈದ್ಯಕೀಯ ತಂಡಗಳ ಶೋಧ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆ ತಂಡಗಳನ್ನು ಪರಿಹಾರ ಸಾಮಗ್ರಿಗಳೊಂದಿಗೆ ತಕ್ಷಣವೇ ರವಾನಿಸಲು ನಿರ್ಧರಿಸಲಾಗಿದೆ” ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

“ವಿಶೇಷ ತರಬೇತಿ ಪಡೆದ ಶ್ವಾನದಳಗಳು ಮತ್ತು ಅಗತ್ಯ ಉಪಕರಣಗಳೊಂದಿಗೆ 100 ಸಿಬ್ಬಂದಿಗಳನ್ನು ಒಳಗೊಂಡಿರುವ ಎನ್‌ಡಿಆರ್‌ಎಫ್‌ನ ಎರಡು ತಂಡಗಳು ಭೂಕಂಪ ಪೀಡಿತ ಪ್ರದೇಶಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹಾರಲು ಸಿದ್ಧವಾಗಿವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಗತ್ಯ ಔಷಧಗಳೊಂದಿಗೆ ತರಬೇತಿ ಪಡೆದ ವೈದ್ಯರು ಮತ್ತು ಅರೆವೈದ್ಯರೊಂದಿಗೆ ವೈದ್ಯಕೀಯ ತಂಡಗಳನ್ನು ಸಹ ಸಿದ್ಧಗೊಳಿಸಲಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top