News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕ ಉದ್ಘಾಟಿಸಿದ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು  ತುಮಕೂರಿನಲ್ಲಿ ಭಾರತದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ರಫೇಲ್ ಯುದ್ಧ ವಿಮಾನಗಳ ಒಪ್ಪಂದ ಬಗ್ಗೆ ಅಪಪ್ರಚಾರ ಮಾಡಿದ ವಿರೋಧ ಪಕ್ಷಗಳನ್ನು ಸೂಕ್ಷ್ಮವಾಗಿ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಎಚ್‌ಎಎಲ್ ಬಗ್ಗೆ ತಪ್ಪು ಮಾಹಿತಿ ಹರಡಲಾಗಿತ್ತು ಮತ್ತು ನಮ್ಮ ಸರ್ಕಾರದ ವಿರುದ್ಧ ಅನೇಕ ಸುಳ್ಳು ಆರೋಪಗಳನ್ನು ಮಾಡಲಾಗಿತ್ತು. ಇದರಿಂದ ಸಂಸತ್ತಿನ ಹಲವು ಕೆಲಸದ ಸಮಯ ವ್ಯರ್ಥವಾಯಿತು. ಆದರೀಗ ಸತ್ಯ ತನ್ನಷ್ಟಕ್ಕೆ ಬಿಚ್ಚಿಕೊಳ್ಳುತ್ತಿದೆ ಎಂದಿದ್ದಾರೆ.

“ಎಚ್‌ಎಎಲ್‌ನ ಹೆಲಿಕಾಪ್ಟರ್ ಫ್ಯಾಕ್ಟರಿ ಮತ್ತು ಅದರ ಹೆಚ್ಚುತ್ತಿರುವ ಶಕ್ತಿಯು ಸುಳ್ಳು ಆರೋಪಗಳನ್ನು ಹೊರಿಸುವವರ ನಿಜ ಮುಖವನ್ನು ಅನಾವರಣಗೊಳಿಸಿದೆ. ಎಚ್‌ಎಎಲ್ ರಕ್ಷಣೆಯಲ್ಲಿ ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ. ಈ ಕಾರ್ಖಾನೆಯು ವಿರೋಧ ಪಕ್ಷಗಳ ಆರೋಪಗಳಿಗೆ ಉತ್ತರವಾಗಿದೆ. ಸತ್ಯವು ಇಂದು ಸ್ವೈಂ ಆಗಿ ಬಹಿರಂಗಗೊಳ್ಳುತ್ತಿದೆ” ಎಂದಿದ್ದಾರೆ.

ಪ್ರಧಾನಿ ಮೋದಿ ಸರ್ಕಾರ ಎಚ್‌ಎಎಲ್‌ ಅನ್ನು ನಾಶಪಡಿಸುತ್ತಿದೆ ಮತ್ತು ಎಚ್‌ಎಎಲ್‌ನಿಂದ ಗುತ್ತಿಗೆಯನ್ನು ಕಸಿದುಕೊಂಡು ಕರ್ನಾಟಕದ ಜನರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಆರೋಪಿಸಿದ್ದರು. ಇದಕ್ಕೆ ಇಂದು ಮೋದಿ ಪ್ರತ್ಯುತ್ತರ ನೀಡಿದ್ದಾರೆ.

ಇಂದು ಉದ್ಘಾಟನೆಗೊಂಡ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯು ಲಘು ಉಪಯುಕ್ತ ಹೆಲಿಕಾಪ್ಟರ್‌ಗಳು ಮತ್ತು ಭಾರತೀಯ ಬಹು ಪಾತ್ರದ ಹೆಲಿಕಾಪ್ಟರ್‌ಗಳನ್ನು ತಯಾರಿಸಲಿದೆ. ಆರಂಭದಲ್ಲಿ, ಕಾರ್ಖಾನೆಯು ವರ್ಷಕ್ಕೆ ಸುಮಾರು 30 ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸುತ್ತದೆ, ಇದನ್ನು ಹಂತ ಹಂತವಾಗಿ 60 ಮತ್ತು ನಂತರ 90 ವರ್ಷಕ್ಕೆ ಹೆಚ್ಚಿಸಲಾಗುವುದು. ಮುಂದಿನ ಎರಡು ದಶಕಗಳಲ್ಲಿ ತುಮಕೂರು ಕಾರ್ಖಾನೆಯು 1000 ಹೆಲಿಕಾಪ್ಟರ್‌ಗಳನ್ನು ತಯಾರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top