News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಟರ್ಕಿ, ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 3,800ಕ್ಕೆ ಏರಿಕೆ, ಭಾರತದಿಂದ ನೆರವು ರವಾನೆ

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭಾರೀ ಭೂಕಂಪಗಳಲ್ಲಿ ಸತ್ತವರ ಸಂಖ್ಯೆ 3,800 ದಾಟಿದೆ. ಈ ಪ್ರದೇಶದಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ.

ನೂರಾರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಟರ್ಕಿ ಮತ್ತು ಸಿರಿಯಾದಾದ್ಯಂತ ಪಟ್ಟಣಗಳಲ್ಲಿ ರಕ್ಷಣಾ ಕಾರ್ಯಕರ್ತರು ಅವಶೇಷಗಳ ಅಡಿ ಹುಡುಕಾಡುತ್ತಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

ನಿನ್ನೆ ಜನ ನಿದ್ದೆಯಲ್ಲಿದ್ದಾಗ ಎರಡೂ ದೇಶಗಳಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದು 1939 ರಿಂದ ಟರ್ಕಿಯನ್ನು ಅಪ್ಪಳಿಸಿದ ಅತ್ಯಂತ ಭೀಕರ ದುರಂತವಾಗಿದೆ. ಟರ್ಕಿ, ಸಿರಿಯಾ, ಲೆಬನಾನ್, ಸೈಪ್ರಸ್ ಮತ್ತು ಇಸ್ರೇಲ್‌ನಾದ್ಯಂತ  ಭೂಕಂಪದ ಅನುಭವ ಆಗಿದೆ.

ಭಾರತ, ಯುಎಇ, ಯುರೋಪಿಯನ್ ಯೂನಿಯನ್ ಮತ್ತು ಇಸ್ರೇಲ್ ಸೇರಿದಂತೆ ಪ್ರಪಂಚದಾದ್ಯಂತದ ಹಲವು ದೇಶಗಳು ಟರ್ಕಿ ಮತ್ತು ಸಿರಿಯಾಗೆ ನೆರವು ನೀಡಲು ಮುಂದಾಗಿವೆ.

ಭಾರತವು NDRF ರಕ್ಷಣಾ ತಂಡಗಳು, ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ಸರಬರಾಜುಗಳು, ಡ್ರಿಲ್ಲಿಂಗ್ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳ ಭೂಕಂಪ ಪರಿಹಾರ ಸಾಮಗ್ರಿಗಳ 1 ನೇ ಬ್ಯಾಚ್ ಅನ್ನು ಟರ್ಕಿಗೆ ಕಳುಹಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top