ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ. ಆಯಾ ರಾಜ್ಯಗಳಿಗೆ ಹೋದಾಗ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ಭಾಷಣ ಆರಂಭಿಸುತ್ತಾರೆ. ಅಲ್ಲದೇ ಆಯಾ ರಾಜ್ಯಗಳಿಗೆ ಸಂಬಂಧಿಸಿದ ವಿಶೇಷ ದಿನಗಳಿಗೆ ಆಯಾ ಭಾಷೆಗಳಲ್ಲೇ ಟ್ವೀಟ್ ಮಾಡಿ ಶುಭಕೋರುತ್ತಾರೆ. ಈ ಮೂಲಕ ಎಲ್ಲಾ ಭಾರತೀಯ ಭಾಷೆಗಳಿಗೂ ಅವರು ಗೌರವ ನೀಡುತ್ತಾರೆ.
ಅಷ್ಟೇ ಅಲ್ಲದೆ ಮೋದಿ ಇತರ ರಾಜ್ಯಗಳ ಭಾಷೆಯನ್ನು ಕಲಿಯುವುದಕ್ಕೆ ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ. ಈ ಬಾರಿ ಅವರು ಕನ್ನಡ ಭಾಷೆಯನ್ನು ಕಲಿಯುವ ಆಸಕ್ತಿಕರ ವಿಧಾನವೊಂದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.
ಕನ್ನಡ ವರ್ಣಮಾಲೆಯನ್ನು ಕಲಿಸುವ ಚಿತ್ರಾತ್ಮಕ ವಿಧಾನದ ಕುರಿತು ಕಿರಣ್ ಕುಮಾರ್ ಎಸ್ ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
“ಭಾಷೆಗಳನ್ನು ಕಲಿಯುವುದನ್ನು ಮೋಜಿನ ಚಟುವಟಿಕೆಯನ್ನಾಗಿ ಮಾಡುವುದು ಸೃಜನಶೀಲ ಮಾರ್ಗ, ಈ ಸಂದರ್ಭದಲ್ಲಿ ಸುಂದರ ಕನ್ನಡ ಭಾಷೆ ಕಲಿಯೋಣ” ಎಂದು ಅವರು ಟ್ವಿಟ್ ಮಾಡಿದ್ದಾರೆ.
A creative way to make learning languages a fun activity, in this case the beautiful Kannada language. https://t.co/OC8XQxh8Sa
— Narendra Modi (@narendramodi) February 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.