News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2022 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 187 ಉಗ್ರರ ಸಂಹಾರ: ಕೇಂದ್ರ

ನವದೆಹಲಿ: 2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದು,  111 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಇಂದು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 125 ಭಯೋತ್ಪಾದಕರು ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದರು ಮತ್ತು ಭದ್ರತಾ ಪಡೆಗಳು 117 ಎನ್‌ಕೌಂಟರ್‌ಗಳನ್ನು ನಡೆಸಿವೆ ಎಂದು ರಾಯ್ ಹೇಳಿದ್ದಾರೆ.

2021 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 180 ಭಯೋತ್ಪಾದಕರು ಕೊಲ್ಲಲ್ಪಟ್ಟರು ಮತ್ತು 95 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಯಿತು ಎಂದು ಅವರು ಬಿಜೆಪಿ ಸದಸ್ಯ ಸುಶೀಲ್ ಕುಮಾರ್ ಮೋದಿಯವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ವೇಳೆ ಮಾಹಿತಿ ನೀಡಿದ್ದಾರೆ.

2021 ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 100 ಎನ್‌ಕೌಂಟರ್‌ಗಳು ಮತ್ತು 129 ಭಯೋತ್ಪಾದಕರ ಸಂಚಿನ ಘಟನೆ ವರದಿಯಾಗಿವೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top