News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2047 ರ ವೇಳೆಗೆ ಭಾರತದಲ್ಲಿ ಇಸ್ಲಾಂ ಆಳ್ವಿಕೆ ಪಿಎಫ್‌ಐ‌ ಗುರಿ: ಮಹಾ ಎಟಿಎಸ್

ನವದೆಹಲಿ: ಕಳೆದ ವರ್ಷ ಕೇಂದ್ರದಿಂದ ನಿಷೇಧಕ್ಕೊಳಗಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ವು 2047 ರ ವೇಳೆಗೆ ಭಾರತದಲ್ಲಿ ಇಸ್ಲಾಂ ಆಳ್ವಿಕೆಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿತ್ತು ಮತ್ತು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪಡೆಯುವ ಯೋಜನೆಯನ್ನು ರೂಪಿಸಿತ್ತು. ತನ್ನ ಗುರಿಗಳನ್ನು ಸಾಧಿಸಲು ಅದು ವಿದೇಶಗಳು ಅಥವಾ ಇತರ ಸಂಸ್ಥೆಗಳ ಸಹಾಯ ಪಡೆಯುತ್ತಿತ್ತು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಹೇಳಿದೆ.

ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ದೇಶದ ವಿರುದ್ಧ ಸಮರ ಸಾರಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲಾದ ಐವರು ಪಿಎಫ್‌ಐ ಸದಸ್ಯರ ವಿರುದ್ಧ ಕಳೆದ ವಾರ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಎಟಿಎಸ್ ಈ ಆರೋಪಗಳನ್ನು ಮಾಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿಮಹಾ ಎಟಿಎಸ್ ಐವರು ಪಿಎಫ್‌ಐ ಸದಸ್ಯರಾದ ಮಜರ್ ಖಾನ್, ಸಾದಿಕ್ ಶೇಖ್, ಮೊಹಮ್ಮದ್ ಇಕ್ಬಾಲ್ ಖಾನ್, ಮೊಮಿನ್ ಮಿಸ್ತ್ರಿ ಮತ್ತು ಆಸಿಫ್ ಹುಸೇನ್ ಖಾನ್ ಅವರನ್ನು ಬಂಧಿಸಿತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಮತ್ತು ರಾಜ್ಯದ ವಿರುದ್ಧ ಕೆಲವು ಅಪರಾಧಗಳನ್ನು ಮಾಡಲು ಸಂಚು ರೂಪಿಸಿದ್ದಕ್ಕಾಗಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಫೆಬ್ರವರಿ 2 ರಂದು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ, ಎಟಿಎಸ್ “ಇಂಡಿಯಾ 2047- ಭಾರತದಲ್ಲಿ ಇಸ್ಲಾಂ ಆಡಳಿತದ ಕಡೆಗೆ” ಎಂಬ ದಾಖಲೆಯನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ವಶಪಡಿಸಿಕೊಂಡ ದಾಖಲೆ ಸರಕಾರವನ್ನು ಉರುಳಿಸಲು ಮಾರ್ಗಸೂಚಿಯನ್ನು ಒಳಗೊಂಡಿತ್ತು.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಮೇಲ್ಜಾತಿ ಹಿಂದೂಗಳ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿರುವ ಸಂಘಟನೆ ಎಂದು ಬಿಂಬಿಸುವ ಮೂಲಕ ಪಿಎಫ್‌ಐ ಹಲವಾರು ಸಮುದಾಯಗಳ ನಡುವೆ ಒಡಕು ಸೃಷ್ಟಿಸಲು ಬಯಸಿತ್ತು ಎಂದು ಆರೋಪಪಟ್ಟಿ ಹೇಳಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top