News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತ್ರಿಪುರಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಹಲವು ಮಹತ್ತರ ಭರವಸೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಅಗರ್ತಲಾದಲ್ಲಿ ತ್ರಿಪುರಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರಣಾಳಿಕೆ ಸಂಕಲ್ಪ ಪತ್ರ -2023 ಅನ್ನು ಬಿಡುಗಡೆ ಮಾಡಿದರು. ಇದರಲ್ಲಿ ಧರ್ಮಗುರು ಅನುಕೂಲ್‌ ಚಂದ್ರ ಅವರು ಹೆಸರಿನಲ್ಲಿ 5 ರೂಪಾಯಿಗೆ ಊಟ ನೀಡುವ ಮಹತ್ವದ ಘೋಷಣೆ ಮಾಡಲಾಗಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಬಡ ಕುಟುಂಬಕ್ಕೆ ಅವರ ನವಜಾತ ಹೆಣ್ಣು ಮಗುವಿಗೆ 50 ಸಾವಿರ ರೂಪಾಯಿ ಬಾಂಡ್ ನೀಡುವುದಾಗಿ ಭರವಸೆ ನೀಡಿದರು. ಉಜ್ಜಲ ಫಲಾನುಭವಿಗಳಿಗೆ 2 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ಹೇಳಿದರು. ಪ್ರತಿ ಬುಡಕಟ್ಟು ಬ್ಲಾಕ್‌ನಲ್ಲಿ ಒಂದು ಏಕಲವ್ಯ ಮಾದರಿ ಶಾಲೆ ಸ್ಥಾಪಿಸುವುದಾಗಿಯೂ ಪಕ್ಷ ಭರವಸೆ ನೀಡಿದೆ. ರಾಜ್ಯದ ಭೂರಹಿತ ರೈತರಿಗೆ ವರ್ಷಕ್ಕೆ 3000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಮತ್ತು ಅದರಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಸದಾ ಬದ್ಧವಾಗಿದೆ ಎಂದು ನಡ್ಡಾ ಹೇಳಿದರು. 2018 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮತ್ತು ಅಭಿವೃದ್ಧಿ ಪ್ರಕ್ರಿಯೆಯು ಪ್ರಾರಂಭವಾದ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ, ದಂಗೆ, ಅಪರಾಧ ಕಣ್ಮರೆಯಾಗಿದೆ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ತಂದಿದೆ ಎಂದು ಹೇಳಿದರು.

ಬಿಜೆಪಿ ಆಡಳಿತದಲ್ಲಿ ತ್ರಿಪುರಾದಲ್ಲಿ ಜನರು ಜಲ ಜೀವನ್ ಮಿಷನ್ ಅಡಿಯಲ್ಲಿ ಮನೆ ಮತ್ತು ಶುದ್ಧ ಕುಡಿಯುವ ನೀರಿನ ಸೌಲಭ್ಯಗಳನ್ನು ಪಡೆದರು. ತ್ರಿಪುರಾದಲ್ಲಿ 13 ಲಕ್ಷ ಆಯುಷ್ಮಾನ್ ಭಾರತ್ ಕಾರ್ಡ್ ನೀಡಲಾಗಿದೆ ಎಂದು ಬಿಜೆಪಿ ನಡ್ಡಾ ಉಲ್ಲೇಖಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top