News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದ ಬಲವಾದ ಆರ್ಥಿಕ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ ಐಎಂಎಫ್

ನವದೆಹಲಿ:  ಜಾಗತಿಕ ಸವಾಲುಗಳ ಸಂದರ್ಭದಲ್ಲೂ ಭಾರತದ ಬಲವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕತೆಯ ಡಿಜಿಟಲೀಕರಣದಲ್ಲಿ ಮುಂಚೂಣಿ ಪಾತ್ರವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF)ಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಶ್ಲಾಘಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಅವರು ಈ ತಿಂಗಳ ಕೊನೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಮುಂಬರುವ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಕುರಿತು ಚರ್ಚಿಸಲು ಇಂದು ವರ್ಚುವಲ್ ಸಂವಾದ ನಡೆಸಿದರು.

ಕ್ರಿಸ್ಟಲಿನಾ ಜಾರ್ಜಿವಾ ಅವರು ಐಎಂಎಫ್ ಮತ್ತು ಭಾರತದ ನಡುವಿನ ಪಾಲುದಾರಿಕೆಯಲ್ಲಿರುವ  ದಕ್ಷಿಣ ಏಷ್ಯಾ ಪ್ರಾದೇಶಿಕ ತರಬೇತಿ ಮತ್ತು ತಾಂತ್ರಿಕ ಸಹಾಯ ಕೇಂದ್ರಕ್ಕೆ 50 ಮಿಲಿಯನ್ ಡಾಲರ್‌ಗಳ ಭಾರತದ ಕೊಡುಗೆಯನ್ನು ಶ್ಲಾಘಿಸಿದರು. ಇದು ದಕ್ಷಿಣ ಏಷ್ಯಾ ವಲಯದಲ್ಲಿ ಸಾಮರ್ಥ್ಯವನ್ನು ನಿರ್ಮಿಸುವಲ್ಲಿ ಭಾರತ ಮತ್ತು IMF ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಚರ್ಚೆಯ ಸಮಯದಲ್ಲಿ ಮಾತನಾಡಿದ ಸೀತಾರಾಮನ್‌, ಜಿ20 ರಾಷ್ಟ್ರಗಳ ನಾಯಕತ್ವದಲ್ಲಿ ಭಾರತವು ಅತ್ಯಂತ ದುರ್ಬಲ ಮತ್ತು ಕಡಿಮೆ ಪ್ರಾತಿನಿಧ್ಯದ ಧ್ವನಿಯನ್ನು ಆಲಿಸಿದೆ. ಅಲ್ಲದೇ ಎಲ್ಲರಿಗೂ ಆಹಾರ ಮತ್ತು ಇಂಧನ ಭದ್ರತೆಯನ್ನು ಖಾತರಿಪಡಿಸುವ ಅಗತ್ಯವಿದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top